Home Advertisement
Home ನಮ್ಮ ಜಿಲ್ಲೆ ಕೊಡಗು ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ

ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ

0
220

ಮಡಿಕೇರಿ: ನನಗೆ ಏಕೆ ಎರಡು ಬಾರಿ ಟಿಕೆಟ್ ಏಕೆ ಕೊಡಲಿಲ್ಲ ಎಂಬುದು ಗೊತ್ತಿಲ್ಲ. ಯಾರು ಟಿಕೆಟ್ ತಪ್ಪಿಸಿದರು ಎಂಬುದೂ ಗೊತ್ತಿಲ್ಲ. ಆದರೆ ಯಾರೋ ನಾಯಕರು ತಪ್ಪಿಸಿದ್ದಂತೂ ಹೌದು ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ ಹೇಳಿದರು.
ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿರುವ ಅವರು ನನಗೆ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿವರವಾದ ಉತ್ತರ ಕೊಡುವೆ. ಮಾತ್ರವಲ್ಲ,‌‌‌ ಪಕ್ಷದ ಶಿಸ್ತು ಸಮಿತಿ ವಿಚಾರಣೆಗೆ ಕರೆದರೆ ಹಾಜರಾಗಿ ವಿವರಣೆ ಕೊಡುವೆ, ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ, ನಮ್ಮ ಕಾರ್ಯಕರ್ತರು ನೀವು ನಿಲ್ಲಲೇಬೇಕೆಂದು ಒತ್ತಾಯಿಸಿದ್ದರಿಂದ ನಾನು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದಿದ್ದಾರೆ. ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಫಿದ್ದರೂ ವರ್ಷದಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೆ, ಇದರಿಂದ ಪರಿಷತ್ ಟಿಕೆಟ್ ಸಿಗುತ್ತದೆ ಎನ್ನುವ ನಂಬಿಕೆ ಇತ್ತು. ಆದರೂ ನನಗೆ ಆ ಟಿಕೆಟ್ ಅನ್ನು ತಪ್ಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.