Home ನಮ್ಮ ಜಿಲ್ಲೆ ಕೋಲಾರ ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಪಲ್ಟಿ: ನಾಲ್ವರ ಸಾವು

ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಪಲ್ಟಿ: ನಾಲ್ವರ ಸಾವು

0

ಕೋಲಾರ: ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಭಾನುವಾರ ತಡರಾತ್ರಿ ಕಾರೊಂದು ರಸ್ತೆ ಸೇತುವೆಯಿಂದ ಪಲ್ಟಿ ಹೊಡೆದು ಚನ್ನೈನ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೆದ್ದಾರಿಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು ಸೇತುವೆಯಿಂದ ಕೆಳಗೆ ಬಿದ್ದು ನಾಲ್ವರು ಗಂಭೀರ ಗಾಯಗೊಂಡರು.

ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಮೃತರನ್ನು ಚೆನ್ನೈನ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27) ಹಾಗೂ ಜಯಶಂಕರ್ (30) ಎಂದು ಪೊಲೀಸರು ತಿಳಿಸಿದ್ದಾರೆ.

ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ಸಂಭವಿಸಿದ ಅಪಘಾತ ಪ್ರಕರಣ ಕುರಿತು ಮಾಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version