ಹೊಗೆ ಉಗುಳುತ್ತಿದ್ದ 8 ಉಕ್ಕು ಕಾರ್ಖಾನೆಗಳಿಗೆ ಬೀಗ! ವಿದ್ಯುತ್ ಸಂಪರ್ಕ ಕಡಿತಕ್ಕೂ ಆದೇಶ

ಕೊಪ್ಪಳ: ಜಿಲ್ಲೆಯ ಪರಿಸರಕ್ಕೆ ಹಾನಿ ಉಂಟುಮಾಡುತ್ತಿದ್ದ ಹಾಗೂ ಹೊಗೆ ಉಗುಳುವ ಮೂಲಕ ವಾಯುಮಾಲಿನ್ಯಕ್ಕೆ ಕಾರಣವಾಗಿದ್ದ 8 ಉಕ್ಕು ಕಾರ್ಖಾನೆಗಳನ್ನು ಸ್ಥಗಿತಗೊಳಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಾರ್ಖಾನೆಗಳನ್ನು ಬಂದ್ ಮಾಡುವುದರ ಜತೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆಯೂ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದಿದ್ದ ʻಕೊಪ್ಪಳ ಬಂದ್’ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯದ ವಿರುದ್ಧ ಸಾರ್ವಜನಿಕರು ಧ್ವನಿ ಎತ್ತಿದ್ದರು. ಮಾಲಿನ್ಯಕಾರಕ ಕಾರ್ಖಾನೆಗಳ … Continue reading ಹೊಗೆ ಉಗುಳುತ್ತಿದ್ದ 8 ಉಕ್ಕು ಕಾರ್ಖಾನೆಗಳಿಗೆ ಬೀಗ! ವಿದ್ಯುತ್ ಸಂಪರ್ಕ ಕಡಿತಕ್ಕೂ ಆದೇಶ