ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಮಕ್ಕಳ ಆಯೋಗದಿಂದ ಡಿಸಿ, ಎಸ್ಪಿಗೆ ನೋಟಿಸ್!

0
11

ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಹೊಟ್ಟೆನೋವಿನಿಂದ ನರಳಾಡಿದ್ದಾಳೆ. ಬಳಿಕ ಕೆಲಸಮಯದ ನಂತರ ಹಾಸ್ಟೆಲ್‌ನಲ್ಲಿಯೇ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ವಿದ್ಯಾರ್ಥಿನಿಲಯದಲ್ಲಿ ಅಪ್ರಾಪ್ತ ಬಾಲಕಿ ಹೆರಿಗೆಯಾಗಿದ್ದು, ಈ ವಿಚಾರದಿಂದ ಹಾಸ್ಟೆಲ್‌ನ ವಾತಾವೆಣವೇ ಬದಲಾಗಿದೆ. ಇದೇ ಕಾರಣದಿಂದ ಅಲ್ಲಿರುವ ಮಕ್ಕಳ ಮೇಲೆ ಯಾವುದೇ ಕಟ್ಟ ಪರಿಣಾಮ ಬೀರಬಾರದು ಎನ್ನುವ ವಿಚಾರದಿಂದ, ಈ ಪ್ರಕರಣವನ್ನು ಮಕ್ಕಳ ಹಕ್ಕುಗಳ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಇದರ ಕುರಿತು ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜಿಲ್ಲಾಧಿಕಾರಿ ಮತ್ತು ಎಸ್‌ಪಿಗೆ ಮೂರು ದಿನಗಳಲ್ಲಿ ಮಾಹಿತಿ ನೀಡುವಂತೆ ಸೂಚಿಸಿದೆ. ಘಟನೆಗೆ ಸಂಬಂಧಿಸಿ ಪೊಕ್ಸೋ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಹಾಗೂ ಹಾಸ್ಟೆಲಿನ ವಾರ್ಡನ್‌ರನ್ನು ಅಮಾನತುಗೊಳ್ಳಿಸಲಾಗಿದೆ.

ಶಾಲಾ ವಿದ್ಯಾರ್ಥಿಯೂಬ್ಬಳು ಹತ್ತನೇ ತರಗತಿ ವ್ಯಾಸಂಗ ಮಾಡುತಿದ್ದು, ವಸತಿನಿಲಯದಲ್ಲಿಯೇ‌ ಮಗುವಿಗೆ ಜನ್ಮ ನೀಡಿದಾಳೆ. ಈ ಪ್ರಕರಣವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಕೊಂಡಿದೆ ಎನ್ನಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಪತ್ರ ಬರೆದಿದ್ದಾರೆ. ಪ್ರಕರಣದ ಕುರಿತು ಮೂರು ದಿನಗಳ ಒಳಗೆ ಆಯೋಗಕ್ಕೆ ಮಾಹಿತಿ ನೀಡಲು ಸೂಚಿಸಲಾಗಿದೆ. ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಗೆ ಹೆರಿಗೆಯಾಗಿದ್ದು, ಬಳಿಕ ತಾಯಿ ಮತ್ತು ನವಜಾತ ಶಿಶುವನ್ನ ಆಸ್ಪತ್ರೆಗೆ ದಾಖಲಿಸಾಗಿದೆ.

ಇದೇ ವಿಚಾರ ಊರಿನ ಎಲ್ಲರಿಗೊ ಮುಜುಗರವನ್ನುಂಟು ಮಾಡಿದ್ದು, ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ತಕ್ಷಣವೇ ಆಸ್ಪತ್ರೆಗೆ ತೆರೆಳಿದ್ದಾರೆ. ಜೊತೆಗೆ ಕುಕನೂರು ಪೊಲೀಸರು ಘಟನೆಗೆ ಸಂಬಂಧಿಸಿದ ಎಲ್ಲ ಮಾಹಿತಿಯ ಕುರಿತು ಇಗಾಗಲೇ ಕಾರ್ಯಾಚರಣೆ ನಡೆಸಿದ್ದಾರೆ.

ಸದ್ಯ ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಘಟನೆ ಸಂಬಂಧ ವಸತಿ ನಿಲಯದ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣುತ್ತಿರುವ ಹಿನ್ನಲೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ ಎನ್ನಲಾಗಿದೆ. ಈ ಪ್ರಕರಣ ಕುರಿತು ಯಲಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ ಪ್ರತಿಕ್ರಿಯಿಸಿದಾರೆ. ಹಾಗೇ ಮಾಹಿತಿಯ ಪ್ರಕಾರ ಘಟನೆಗೆ ಕಾರಣವಾದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Previous articleಬೆಂಗಳೂರಿಗರಿಗೆ ಮತ್ತೊಂದು ‘ವಂದೇ ಭಾರತ್’ ಭಾಗ್ಯ: ತಿರುಪತಿ ಪ್ರಯಾಣ ಇನ್ಮುಂದೆ ಝಟಾಪಟ್!
Next articleಟಿಪ್ಪು ಜಯಂತಿ: ಎರಡು ಗುಂಪಿನ ಮಧ್ಯೆ ಸಂಘರ್ಷ, 40 ಜನರ ಮೇಲೆ ಪ್ರಕರಣ ದಾಖಲು

LEAVE A REPLY

Please enter your comment!
Please enter your name here