SK Home Ad
Home ನಮ್ಮ ಜಿಲ್ಲೆ ಕೊಪ್ಪಳ ಜೂ. 25ಕ್ಕೆ ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಜೂ. 25ಕ್ಕೆ ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

0
3

ಹೊಸಪೇಟೆ: ಹೊಸ ಕ್ರಸ್ಟ್‌ಗೇಟ್ ಅಳವಡಿಕೆಯಾದ ಹಿನ್ನೆಲೆಯಲ್ಲಿ ಗುರುವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ 19ನೇ ಕ್ರಸ್ಟ್‌ಗೇಟ್ ವೀಕ್ಷಿಸಿ, ಟಿಬಿ ಬೋರ್ಡ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಜೂನ್ 25ರಂದು 33 ಹೊಸ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ. ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಮೂರೂ ರಾಜ್ಯಗಳ ಸಿಎಂ ಮತ್ತು ಕೇಂದ್ರ ಜಲಶಕ್ತಿ ಸಚಿವರು ಉದ್ಘಾಟನೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಚಿವರು ಕಾರ್ಯಕ್ರಮದ ಸ್ಥಳ, ಪೂರ್ವ ಸಿದ್ಧತೆ ಕುರಿತು ಸಭೆ ನಡೆಸಿ ಅಧಿಕಾರಿಗಳ ಜೊತೆ ಚರ್ಚಿಸಿದರು.

ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜೂ. 25 ರಂದು ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್‌ಗೇಟ್ ಲೋಕಾರ್ಪಣೆ ಮಾಡಲಾಗುತ್ತದೆ, ಸಿಎಂ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವರು, ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಸಿದ್ಧತೆ ನಡೆದಿದೆ ಎಂದರು.

ಬಿಡದಿ ಟೌನ್‌ಶಿಪ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 2006 ರಲ್ಲಿ ಸಮ್ಮಿಶ್ರ ಸರಕಾರದವರು ಮಾಡಿದ್ದೇನು ಎಂದು ಪ್ರಶ್ನಿಸಿದರು. ಖಾತೆಗಾಗಿ ಕ್ಯಾತೆ ತೆಗೆದಿದ್ದ ವಿಚಾರವಾಗಿ ಪ್ರಶ್ನಿಸಿದಾಗ, ನಾನು ಎಂದಿಗೂ ಖಾತೆ ಹಿಂದೆ ಹೋದವನಲ್ಲ ಎಂದು ಹೇಳಿದರು. ನನಗೆ ನೀರಾವರಿ ಖಾತೆ ಕೊಟ್ಟಿದ್ದಾರೆ, ರೈತರ ಪರ ಕೆಲಸ ಮಾಡುತ್ತೇನೆ. ರೈತರ ಕೆಲಸ ಮಾಡೋ ಅವಕಾಶ ಸಿಕ್ಕಿದ್ದು ನನಗೆ ಅತ್ಯಂತ ಖುಷಿ ಇದೆ ಎಂದರು.