ಕಾವೇರಿ ವಿವಾದ: ʻಜನನಾಯಗನ್’ ಪೋಸ್ಟರ್ ಹರಿದು ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಗುರುವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ, ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅಭಿನಯದ ʻಜನನಾಯಗನ್ʼ ಚಿತ್ರದ ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು. ನಗರದ ಗುರುಶ್ರೀ ಚಿತ್ರಮಂದಿರದ ಎದುರು ಕರುನಾಡ ವಿಜಯ ಸೇನೆ ರಾಜ್ಯಾಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ತಮಿಳು ಚಿತ್ರಗಳನ್ನು ಪ್ರದರ್ಶಿಸುವುದನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದರು. … Continue reading ಕಾವೇರಿ ವಿವಾದ: ʻಜನನಾಯಗನ್’ ಪೋಸ್ಟರ್ ಹರಿದು ಪ್ರತಿಭಟನೆ