SK Home Ad
Home ನಮ್ಮ ಜಿಲ್ಲೆ ಮಂಡ್ಯ ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರ ಶವ ಪತ್ತೆ

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರ ಶವ ಪತ್ತೆ

0
86
ಸಾಂದರ್ಭಿಕ ಚಿತ್ರ

ಕಾವೇರಿ ನದಿಯಲ್ಲಿ ಮತ್ತೆ ದುರಂತ: ಐವರು ನೀರುಪಾಲಾದ ಸ್ಥಳದಲ್ಲೇ ಮತ್ತೆ ಶವ ಪತ್ತೆ – ಮುತ್ತತ್ತಿ ತೀರದಲ್ಲಿ ವೈದ್ಯ ಡಾ. ರಕ್ಷಿತ್ ಗೌಡ ಮೃತದೇಹ ಪತ್ತೆ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ನದಿ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ವೈದ್ಯರಾದ ಡಾ. ರಕ್ಷಿತ್ ಗೌಡ ಅವರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.

ಕೆಲವೇ ದಿನಗಳ ಹಿಂದೆ ಇದೇ ಮುತ್ತತ್ತಿ ಪ್ರದೇಶದಲ್ಲಿ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಐವರು ಸೆಲ್ಫಿ ತೆಗೆಯುವ ವೇಳೆ ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟ ಘಟನೆ ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೆ ಅದೇ ಪ್ರದೇಶದಲ್ಲಿ ಮತ್ತೊಂದು ಶವ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ ಹೊಸ ನಿಯಮ: ನಕಲಿ ಔಷಧ ತಡೆಗೆ QR code ಅಸ್ತ್ರ

ಭಾನುವಾರ ಸ್ಥಳೀಯ ನಿವಾಸಿಗಳು ಕಾವೇರಿ ನದಿಯಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಹಲಗೂರು ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈದ್ಯರು ಯಾವ ಸಂದರ್ಭದಲ್ಲು ನದಿಗೆ ಇಳಿದಿದ್ದರು, ಅಪಘಾತದಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಬೇರೆ ಕಾರಣವಿದೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ತೆರಿಗೆ ಸೋರಿಕೆಗೆ ಬ್ರೇಕ್: ಅಧಿಕಾರಿಗಳಿಗೆ CM DK ಖಡಕ್ ಸಂದೇಶ

ಮುತ್ತತ್ತಿ ಪ್ರದೇಶದಲ್ಲಿ ಇತ್ತೀಚೆಗೆ ನಿರಂತರವಾಗಿ ಅನಾಹುತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳು ಮೂಡಿವೆ. ಅಪಾಯದ ಸ್ಥಳಗಳಲ್ಲಿ ಹೆಚ್ಚಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.