Home ನಮ್ಮ ಜಿಲ್ಲೆ ಮಂಡ್ಯ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್ ಚೆಲುವರಾಯಸ್ವಾಮಿ

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್ ಚೆಲುವರಾಯಸ್ವಾಮಿ

0

ಮಂಡ್ಯ: ಸೋಮವಾರ ಬೆಳ್ಳಿಗೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಅವರ ಮೃತ ದೇಹವನ್ನು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ವಶ ವಿಕ್ಷಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತ ಮಂಜೇಗೌಡ ಕೆ.ಆರ್ ಪೇಟೆ ತಾಲ್ಲೂಕಿನ ಮಲ್ಲೇನಹಳ್ಳಿಯ ಸ.ನಂ 103 ಅರಣ್ಯ ಇಲಾಖೆಗೆ ಸೇರಿದ ಬಿಳು ಜಾಗದಲ್ಲಿ ಕಲ್ಲುಗಳನ್ನು ತೆಗೆದು ವ್ಯವಾಸಯ ಮಾಡುತ್ತಿರುತ್ತಾರೆ ಸದರಿ ಜಾಗ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ.ನಂ 103 ರಲ್ಲಿ ವ್ಯವಸಾಯ ಮಾಡಬಾರದು ಎಂದು ತಿಳಿಸಿರುತ್ತಾರೆ.

ಮಂಜೇಗೌಡ ತಮ್ಮ ಕುಟುಂಬದಲ್ಲಿ 10 ಜನ ವಾಸವಾಗಿದ್ದು ಯಾವುದೇ ಜಮೀನು ಇರುವುದಿಲ್ಲವೆಂದು ಮನವಿ ಸಲ್ಲಿಸಿರುತ್ತಾರೆ ಆದರೆ ದಾಖಲೆಗಳನ್ನು ಪರಿಶೀಲಿಸಿ ನೋಡಿದಾಗ ಮಂಜೇಗೌಡರ ಹೆಸರಿನಲ್ಲಿ ಒಟ್ಟು 4 ಎಕ್ಕರೆ 1 ಗುಂಟೆ ಪಹಣಿಯಿರುವುದು ಕಂಡು ಬಂದಿರುತ್ತದೆ.

ಮಂಜೇಗೌಡ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 14-08-2014 ರಲ್ಲಿ ರೂ 3,50,000 ಬೆಳೆ ಸಾಲ ಪಡೆದಿದ್ದು ಪ್ರಸ್ತುತ ರೂ 7.79,613 ಬಾಕಿ ಪಾವತಿ ಮಾಡದೇ ಉಳಿಸಿಕೊಂಡಿರುತ್ತಾರೆ.ಎಂಬ ಮಾಹಿತಿಯನ್ನು ಕುಟುಂಬಸ್ಥರು ಸಚಿವರಿಗೆ ನೀಡಿರುತ್ತಾರೆ. ನಂತರ ಮೃತ ರೈತನ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಸಚಿವರು ಘೋಷಿಸಿದರು. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಹೆಚ್ಚುವರಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಮೃತ ರೈತನ ಜಾಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸದರಿ ಜಾಗವನ್ನು ಜಂಟಿ ಸರ್ವೆ ನಡೆಸಿ ಸ್ಥಳವೇನಾದರೂ ಅರಣ್ಯ ಇಲಾಖೆಗೆ ಒಡೆತನಕ್ಕೆ ಸೇರದಿದ್ದರೆ ಸದರಿ ಜಾಗವನ್ನು ಕುಟುಂಬಸ್ಥರಿಗೆ ನೀಡುವುದಾಗಿ ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version