Home ನಮ್ಮ ಜಿಲ್ಲೆ Gali Anjaneya Temple : ಬೆಂಗಳೂರಿನ ಪ್ರಸಿದ್ಧ ದೇವಾಲಯ ಮುಜರಾಯಿ ಇಲಾಖೆಗೆ

Gali Anjaneya Temple : ಬೆಂಗಳೂರಿನ ಪ್ರಸಿದ್ಧ ದೇವಾಲಯ ಮುಜರಾಯಿ ಇಲಾಖೆಗೆ

ಬೆಂಗಳೂರು: ವಿವಿಧ ಕಾರಣಕ್ಕೆ ಸದಾ ಸುದ್ದಿಯಲ್ಲಿದ್ದ ಬೆಂಗಳೂರು ನಗರದ ಪ್ರಸಿದ್ಧ ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ. ಹುಂಡಿಯ ಹಣ ಎಣಿಸುವಾಗಲೇ ಆಡಳಿತ ಮಂಡಳಿ ಸದಸ್ಯರು ಹಣ ಎಗರಿಸಿದ ಘಟನೆ ಕೆಲವು ದಿನಗಳ ಹಿಂದೆ ದೇವಾಲಯದಲ್ಲಿ ನಡೆದಿತ್ತು.

ಬೆಂಗಳೂರು ನಗರದ ಮೈಸೂರು ರಸ್ತೆಯಲ್ಲಿರುವ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ವಶಕ್ಕೆ ಪಡೆದು ಸರ್ಕಾರ ಆದೇಶಿಸಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ದೇವಾಲಯಗಳಲ್ಲಿ ಇದು ಪ್ರಮುಖವಾಗಿದೆ.

ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಡತದ ಅನ್ವಯ ಈ ಆದೇಶವನ್ನು ಹೊರಡಿಸಿದ್ದು, ಆದೇಶ ಬೆಂಗಳೂರು ನಗರ ಜಿಲ್ಲೆ ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯ ಘೋಷಿತ ಸಂಸ್ಥೆಯನ್ನಾಗಿ ಘೋಷಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಡತದಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಹುಂಡಿ ಪರ್ಕಾವಣೆ ಸಂದರ್ಭದಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೇವಾಲಯದ ಸಿಬ್ಬಂದಿಯಿಂದಳೇ ಕಳ್ಳತನವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೇವಾಲಯದ ಆಡಳಿತವನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಆದ ಕಾರಣ ಸದರಿ ದೇವಾಲಯವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅನ್ವಯ ಸರ್ಕಾರದ ವಶಕ್ಕೆ ಪಡೆಯಲು ಸ್ಪಷ್ಟ ಅಭಿಪ್ರಾಯ ನೀಡುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಜಿಲ್ಲಾಧಿಕಾರಿಗಳನ್ನು ಕೋರಿದ್ದರು.

ಜಿಲ್ಲಾಧಿಕಾರಿಗಳು ಸರ್ಕಾರದ ವಶಕ್ಕೆ ಪಡೆಯುವ ಸಂಬಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಕಾಯ್ದೆಯ ಕಲಂ 43(6)ರಡಿಯಲ್ಲಿ ವಿಚಾರಣೆಯನ್ನು ನಡೆಸಿ ವಿಚಾರಣಾ ವರದಿಯನ್ನು ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರಿಗೆ ಸಲ್ಲಿಸಿರುತ್ತಾರೆ.

ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದ್ದು, ಟ್ರಸ್ಟ್‌ನ ಪದಾಧಿಕಾರಿಗಳ ನಡುವೆ ಹೊಂದಣಿಕೆ ಇಲ್ಲ. ಆದಾಯವನ್ನು ಉಳಿತಾಯವಿಲ್ಲದೇ ವೆಚ್ಚ ಮಾಡಲಾಗುತ್ತಿದೆ. ದೇವಾಲಯದ ಆದಾಯ ದುರುಪಯೋಗವಾಗುತ್ತಿರುವುದು ಕಂಡುಬರುತ್ತಿದೆ ಎಂದು ವಿವರಣೆ ನೀಡಲಾಗಿತ್ತು.

ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದ್ದು, ಟ್ರಸ್ಟ್‌ನ ಪದಾಧಿಕಾರಿಗಳ ನಡುವೆ ಹೊಂದಣಿಕೆ ಇಲ್ಲ. ಆದಾಯವನ್ನು ಉಳಿತಾಯವಿಲ್ಲದೇ ವೆಚ್ಚ ಮಾಡಲಾಗುತ್ತಿದೆ. ದೇವಾಲಯದ ಆದಾಯ ದುರುಪಯೋಗವಾಗುತ್ತಿರುವುದು ಕಂಡುಬರುತ್ತಿದೆ ಎಂದು ವಿವರಣೆ ನೀಡಲಾಗಿತ್ತು.

ಕಳೆದ 25 ವರ್ಷಗಳಿಂದ ದೇವಾಲಯದ ಆದಾಯ, ಖರ್ಚಿಗೆ ಯಾವುದೇ ದಾಖಲೆಗಳನ್ನು ಇಟ್ಟಿಲ್ಲ. ಮಜರಾಯಿ ಇಲಾಖೆ ಸಹಾಯಕ ಆಯಕ್ತರು ನೋಟಿಸ್ ನೀಡಿದ ಬಳಿಕ ದಾಖಲೆಗಳನ್ನು ಸೃಷ್ಟಿಸಲಾಗಿದೆ. ದೇವಾಲಯದ ಸಿಬ್ಬಂದಿಗಳು ಹುಂಡಿ ಹಣ ಕದ್ದಿರುವುದು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಜನರಿಗೆ ತಿಳಿದಿದೆ.

ಇದರಿಂದಾಗಿ ದೇವಾಲಯದ ಮತ್ತು ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಆದ್ದರಿಂದ ಸಾರ್ವಜನಿಕ ಮತ್ತು ಭಕ್ತಾದಿಗಳ ಹಿತದೃಷ್ಟಿಯಿಂದ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಕಾಯ್ದೆ 1997ರ ಸೆಕ್ಷನ್ 42 ಮತ್ತು 43ರ ಅಡಿಯಲ್ಲಿ ಸರ್ಕಾರದ ವಶಕ್ಕೆ ಪಡೆಯವುದು ಸೂಕ್ತ ಎಂದು ವರದಿಯಲ್ಲಿ ಜಿಲ್ಲಾಧಿಕಾರಿಗಳು ಹೇಳದ್ದರು.

ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಾಯದ ಆಡಳಿತ ನೋಡಿಕೊಳ್ಳಲು 1984ರಲ್ಲಿ ಟ್ರಸ್ಟ್ ರಚನೆ ಮಾಡಲಾಗಿತ್ತು. ಆದರೆ ದೇವಾಲಯದ ಆದಾಯವನ್ನು ದೇವಾಲಯದ ಅಭಿವೃದ್ಧಿಗೆ ಬಳಕೆ ಮಾಡದೇ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪವಿತ್ತು.

ಕೆಲವು ದಿನಗಳ ಹಿಂದೆ ದೇವಾಲಯಕ್ಕೆ ಭಕ್ತರು ಕಾಣಿಕೆ ನೀಡಲು ಕ್ಯುಆರ್ ಕೋಡ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಕ್ಯೂಆರ್ ಕೋಡ್ ಮೂಲಕ ನೀಡಿದ ದೇಣಿಗೆ ದೇವಾಲಯದ ಖಾತೆಗೆ ಹೋಗದೆ ಅರ್ಚಕರ ಖಾತೆಗೆ ಜಮಾ ಆಗುತ್ತಿತ್ತು ಎಂಬ ಆರೋಪ ಕೇಳಿ ಬಂದಿತ್ತು.

Exit mobile version