SK Home Ad
Home ನಮ್ಮ ಜಿಲ್ಲೆ ಮೈಸೂರು ಎಸ್. ಜಾನಕಿ ಅಂತ್ಯಸಂಸ್ಕಾರಕ್ಕೆ ಕಣಿಯನಹುಂಡಿಯಲ್ಲಿ ಸಕಲ ಸಿದ್ಧತೆ

ಎಸ್. ಜಾನಕಿ ಅಂತ್ಯಸಂಸ್ಕಾರಕ್ಕೆ ಕಣಿಯನಹುಂಡಿಯಲ್ಲಿ ಸಕಲ ಸಿದ್ಧತೆ

0
53

ಮೈಸೂರು: ವಿಧಿವಶರಾದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಸಂಸ್ಕಾರ ಇಂದು ಮೈಸೂರು ಜಿಲ್ಲೆಯ ಸರಗೂರು ಸಮೀಪದ ಕಣಿಯನಹುಂಡಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದ್ದು, ಸಿದ್ಧತೆಗಳು ನಡೆದಿವೆ. ಸಂಜೆ 5.30ರೊಳಗೆ ಅಂತಿಮ ವಿಧಿವಿಧಾನಗಳು ಪೂರ್ಣಗೊಳ್ಳಲಿವೆ.

ಜೀವಿತಾವಧಿಯಲ್ಲೇ ತಮ್ಮ ನಿಧನದ ಬಳಿಕ ತಾವು ಅತ್ಯಂತ ಪ್ರೀತಿಯಿಂದ ಬೆಳೆಸಿಕೊಂಡಿದ್ದ ತೋಟದಲ್ಲೇ ಅಂತ್ಯಸಂಸ್ಕಾರ ನಡೆಸಬೇಕೆಂದು ಎಸ್. ಜಾನಕಿ ತಮ್ಮ ಇಚ್ಛೆಯನ್ನು ಕುಟುಂಬ ಸದಸ್ಯರಿಗೆ ತಿಳಿಸಿದ್ದರು. ಅವರ ಕೊನೆಯ ಕೋರಿಕೆಗೆ ಗೌರವ ಸೂಚಿಸಿ, ಕಣಿಯನಹುಂಡಿ ಗ್ರಾಮದ ತೋಟದಲ್ಲೇ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಹಾಗೂ ಜಿಲ್ಲಾಡಳಿತ ನಿರ್ಧರಿಸಿದೆ.

ಅಂತ್ಯಸಂಸ್ಕಾರಕ್ಕಾಗಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಜೆಸಿಬಿ ಯಂತ್ರಗಳ ಮೂಲಕ ತೋಟದ ಜಾಗವನ್ನು ಸಮತಟ್ಟುಗೊಳಿಸುವುದು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕರು ಹಾಗೂ ಗಣ್ಯರ ಆಗಮನದ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಇತರೆ ವ್ಯವಸ್ಥೆಗಳನ್ನೂ ಮಾಡಲಾಗಿದೆ.

ದಕ್ಷಿಣ ಭಾರತದ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಎಸ್. ಜಾನಕಿ ಅವರಿಗೆ ಅಂತಿಮ ನಮನ ಸಲ್ಲಿಸಲು ಸಾವಿರಾರು ಅಭಿಮಾನಿಗಳು, ಕಲಾವಿದರು ಹಾಗೂ ಗಣ್ಯರು ಕಣಿಯನಹುಂಡಿ ಗ್ರಾಮಕ್ಕೆ ಆಗಮಿಸುವ ನಿರೀಕ್ಷೆಯಿದೆ.