SK Home Ad
Home ನಮ್ಮ ಜಿಲ್ಲೆ ಮೈಸೂರು ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್ ಸಿಂಹ ವಿರುದ್ಧ FIR

ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್ ಸಿಂಹ ವಿರುದ್ಧ FIR

0
2

ಮೈಸೂರು: ಟಿ. ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಸೆಕ್ಷನ್ 132, 191, 194, 196(1)(a)(b), 299, 353(1)(b)(c) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಟಿ. ನರಸೀಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಟಿ. ನರಸೀಪುರದಲ್ಲಿ ಗಣೇಶ ಕೂರಿಸುವ ವಿಚಾರಕ್ಕೆ ಇನ್ಸ್‌ಪೆಕ್ಟರ್ ಧಮ್ಕಿಗೆ ಸವಾಲಾಗಿ ನಡೆದ ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು. ಹೀಗಾಗಿ ಸಾರ್ವಜನಿಕ ಸೇವಕರು ಮತ್ತು ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ ಹಾಗೂ ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷ ಉತ್ತೇಜನೆ ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮತ್ತು ಪ್ರಚೋದನಕಾರಿ ಭಾಷಣಗಳ ಆರೋಪ, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.