Home ನಮ್ಮ ಜಿಲ್ಲೆ ಮೈಸೂರು ಅರ್ಜಿ ಸಲ್ಲಿಸಿದ 2 ದಿನದಲ್ಲಿ BPL ಕಾರ್ಡ್: ಮುನಿಯಪ್ಪ

ಅರ್ಜಿ ಸಲ್ಲಿಸಿದ 2 ದಿನದಲ್ಲಿ BPL ಕಾರ್ಡ್: ಮುನಿಯಪ್ಪ

0

ಸಂ.ಕ. ಸಮಾಚಾರ ಮೈಸೂರು : ಬಿಪಿಎಲ್ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುವಾಗ ಎಪಿಎಲ್ ಆಗಿದ್ದರೆ ಅರ್ಜಿ ನೀಡಿದ ಎರಡು ದಿನಗಳಲ್ಲಿ ಪರಿಶೀಲಿಸಿ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದರು.
ವಸ್ತು ಪ್ರದರ್ಶನದ ಆವರಣದಲ್ಲಿ ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದರು.

ಪಡಿತರ ಕಾರ್ಡ್‌ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು ಅರ್ಹರು ಒಂದು ವೇಳೆ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆಯಾಗಿದ್ದರೆ ಸಂಬಂಧಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೆ ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.

ಸರ್ಕಾರ ಭದ್ರ: ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ, ಸರ್ಕಾರ ಸುಭದ್ರವಾಗಿದ್ದು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನುಡಿದಂತೆ ನಡೆಯುತ್ತಿದೆ ಎಂದರು. ಇನ್ನು ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಇಂದಿರಾಕಿಟ್ ವಿತರಣೆ: ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸಿ. ಮಹದೇವಪ್ಪ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್ ಹಾಗೂ ಜಿಲ್ಲಾ ಜೆಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version