ಕೆ.ಎನ್.ರಾಜಣ್ಣ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನ ಯಾರಿಗೆ?

0
11

ಕೆ.ಎನ್.ರಾಜಣ್ಣ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನ ಯಾರಿಗೆ? ಎಂಬ ಚರ್ಚೆ ನಡೆದಿದೆ. ಅನಿಲ್ ಚಿಕ್ಕಮಾದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಗಳ ಅಧ್ಯಕ್ಷರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಬೇಕೆಂದು ಸರಗೂರಿನ ಆರ್ಯ ಈಡಿಗರ ಮುಖಂಡರಾದ ಎಸ್.ಎಸ್. ಬಸವರಾಜು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಅನಿಲ್ ಚಿಕ್ಕಮಾದು ಅವರು ಕ್ಷೇತ್ರದಲ್ಲಿ ಸತತ ಎರಡು ಬಾರಿ ಅತಿ ಹೆಚ್ಚು ಅಂತರದಿಂದ ಗೆಲುವು ಸಾಧಿಸಿ, ಜನಮನ್ನಣೆ ಗಳಿಸಿದ್ದಾರೆ. ಅಲ್ಲದೇ ಮೈಸೂರು ಭಾಗದಲ್ಲಿ ನಾಯಕ ಸಮಾಜದ ಪ್ರಭಾವಿ ನಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ತಂದೆ ಚಿಕ್ಕಮಾದು ಅವರ ಹಾದಿಯಲ್ಲಿ ಸಾಗುತ್ತಿದ್ದಾರೆ. ಸರ್ಕಾರಕ್ಕೆ ನಿಷ್ಠೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಇಂಥವರಿಗೆ ಸರ್ಕಾರ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ.

ನಾಯಕ ಸಮಾಜದ ನಾಯಕರಲ್ಲೇ ಎಸ್.ಚಿಕ್ಕಮಾದು ಹೆಚ್ಚಿನ ಜನಪ್ರಿಯತೆ ಗಳಿಸಿದ್ದವರು. ಅವರ ನಂತರದ ಸ್ಥಾನದಲ್ಲಿ ಅನಿಲ್ ಚಿಕ್ಕಮಾದು ಬಂದಿದ್ದಾರೆ, ಕ್ಷೇತ್ರದಲ್ಲಿ ಎರಡು ಬಾರಿ ಸತತವಾಗಿ ಗೆಲುವು ಸಾಧಿಸಿ, ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಇಂಥವರಿಗೆ ಸಚಿವ ಸ್ಥಾನ ನೀಡಿದರೆ ಹಿಂದುಳಿದ ತಾಲೂಕು ಎಂಬ ಹಣೆಪಟ್ಟೆಯನ್ನು ತೊಲಗಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಂಪುಟದಲ್ಲಿ ಕೆ.ಎನ್.ರಾಜಣ್ಣ ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಅನಿಲ್ ಚಿಕ್ಕಮಾದು ಅವರಿಗೆ ನೀಡಲು ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Previous articleಧರ್ಮಸ್ಥಳ ಕೇಸ್‌: ಆರೋಪಿ ಚಿನ್ನಯ್ಯ ಶಿವಮೊಗ್ಗ ಜೈಲಿಗೆ

LEAVE A REPLY

Please enter your comment!
Please enter your name here