ಮೈಸೂರು: ದಸರಾ ಮಹೋತ್ಸವಕ್ಕೆ ಕ್ಷಣಗಣನೆ –  ಉದ್ಘಾಟನೆ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

ಮೈಸೂರು: ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟನೆ ಮಾಡಲಿದ್ದು  ಚಾಮುಂಡಿ ಬೆಟ್ಟಕ್ಕೆ ಹೋಗುವ ಎಂಟು ಕಿ.ಮೀ ರಸ್ತೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಬಿಜೆಪಿ  ಈ ಹಿಂದೆ ಚಾಮುಂಡಿ ಚಲೋ ಮಾಡಲು ವಿಫಲವಾಗಿತ್ತು. ಈ ಕಾರಣಕ್ಕಾಗಿ  ಬಂದೋ ಬಸ್ತ್ ಮಾಡಲಾಗಿದೆ. ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ.