ಮೈಸೂರು ದಸರಾ 2025: ಚಾಮುಂಡಿ ಬೆಟ್ಟದಲ್ಲಿ ಪಥ ಸಂಚಲನ, ಕಟ್ಟೆಚ್ಚರ

0
31

ಮೈಸೂರು ದಸರಾ 2025 ತಯಾರಿ ಮೈಸೂರು ನಗರದಲ್ಲಿ ನಡೆಯುತ್ತಿದೆ. ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆಯಾಗಿದ್ದಾರೆ. ಆದರೆ ಆಯ್ಕೆ ವಿರೋಧಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

2025ರ ಮೈಸೂರು ದಸರಾ ಅದ್ಧೂರಿಯಾಗಿ ನಡೆಯಲಿದೆ. ಈ ಬಾರಿ 10 ದಿನಗಳ ಬದಲು 11 ದಿನ ದಸರಾ ಆಚರಣೆ ಇರಲಿದೆ. ಸೆಪ್ಟೆಂಬರ್ 22 ರಂದು ದಸರಾ ಉದ್ಘಾಟನೆಯಾಗಲಿದ್ದು, ಅಕ್ಟೋಬರ್ 2ರಂದು ಜಂಬೂ ಸವಾರಿ ನಡೆಯಲಿದೆ.

ಬಾನು ಮುಷ್ತಾಕ್ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ-2025ರ ಉದ್ಘಾಟನೆಯನ್ನು ಸೆಪ್ಟೆಂಬರ್ 22ರಂದು ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು, ಪ್ರವಾಸಿಗರು ಆಗಮಿಸಲಿದ್ದಾರೆ. ಆದ್ದರಿಂದ ಭದ್ರತೆ ಬಿಗಿಗೊಳಿಸಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು & ಸುವ್ಯವಸ್ಥೆ ಕಾಪಾಡಲು, ಮತ್ತು ಸಮಾಜ ಘಾತುಕ ವ್ಯೆಕ್ತಿಯಗಳ ಮೇಲೆ ನಿಗಾವಹಿಸುವ ದೃಷ್ಟಿಯಿಂದ ಕೃಷ್ಣರಾಜ ಪೊಲೀಸ್ ಠಾಣೆಯ ಅಧಿಕಾರಿಗಳು, ಚಾಮುಂಡಿ ಕಮಾಂಡೋ ಪಡೆಗಳು & ಪೊಲೀಸ್ ಸಿಬ್ಬಂದಿಗಳು ಚಾಮುಂಡಿ ಬೆಟ್ಟ ಮತ್ತು ಸುತ್ತಲ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿದ್ದಾರೆ.

ಬುಧವಾರ ಮೈಸೂರು ದಸರಾ-2025ರ ಆಚರಣೆ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಮೈಸೂರು ನಗರಕ್ಕೆ ಭೇಟಿ ನೀಡಿದ್ದರು. ಅರಮನೆ, ಬನ್ನಿಮಂಟಪಕ್ಕೆ ಭೇಟಿ ನೀಡಿ ವಿಜಯದಶಮಿ ಹಬ್ಬದ ದಿನದಂದು ಅರಮನೆಯ ಆವರಣದಲ್ಲಿ ನಡೆಯುವ ದಸರಾ ಜಂಬೂ ಸವಾರಿ ಮೆರವಣಿಗೆ & ಬನ್ನಿಮಂಟಪದ ಪಂಜಿನ ಕವಾಯಿತು ಕಾರ್ಯಕ್ರಮಗಳ ಮಾಹಿತಿ ಪಡೆದರು.

ಈ ಬಾರಿಯ ದಸರಾ ಉದ್ಘಾಟನೆ ವಿಚಾರದಲ್ಲಿ ವಿವಾದ ಉಂಟಾಗಿರುವ ಕಾರಣ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಯಾವುದೇ ಪ್ರತಿಭಟನೆ ಮತ್ತು ಗೊಂದಲ, ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಎಂ.ಎ.ಸಲೀಂ ಸೂಚನೆ ನೀಡಿದ್ದಾರೆ.

ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಬೇಕು. ಹಂತ ಹಂತವಾಗಿ ಭದ್ರತಾ ಕಾರ್ಯ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

Previous articleಅನರ್ಹ ಬಿಪಿಎಲ್ ಕಾರ್ಡ್ ರದ್ದಿಲ್ಲ: ಮಹತ್ವದ ಅಪ್‌ಡೇಟ್‌
Next articleಏಷ್ಯಾ ಕಪ್2025: ಪಾಕ್ ಹಣಾಹಣಿಗೂ ಮುನ್ನ ಟೀಂ ಇಂಡಿಯಾಗೆ ಒಮಾನ್ ಸವಾಲು!

LEAVE A REPLY

Please enter your comment!
Please enter your name here