ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.
ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಈ ವೇಳೆ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.