ಮೈಸೂರು, ಕೊಡಗು, ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ. ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ವಿವರಗಳನ್ನು ಇಲ್ಲಿ ನೀಡಲಾಗಿದೆ. ಶೀಘ್ರದಲ್ಲೇ ಮೈಸೂರಿನಲ್ಲಿ ವಲಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. 120ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಭಾಗಿಯಾಗಲಿದೆ. ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.
ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ್ ಮೈಸೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ. ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ವಿವಿಧ ಕ್ಷೇತ್ರಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಸರು ನೋಂದಣಿ ಮಾಡಬಹುದು. ನೋಂದಣಿಗೆ ವಿಳಾಸ https://udyogamela.ksdckarnataka.com/
ಶಿವಮೊಗ್ಗ ಅತಿಥಿ ಶಿಕ್ಷರ ಹುದ್ದೆಗೆ ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೊರಬ ತಾಲೂಕು ಜಡೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಕನ್ನಡ, ಆಂಗ್ಲ, ಹಿಂದಿ ಮತ್ತು ಗಣಿತ ವಿಷಯಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸೊರಬ ತಾಲುಕು ಹಿರೇಮಾಗಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 18ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9663398179.
ನೇತ್ರ ಸಹಾಯಕರ ಹುದ್ದೆ: ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ನೇತ್ರ ಸಹಾಯಕರ 5 ಖಾಲಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಎರಡು ವರ್ಷದ ಡಿಪ್ಲೋಮಾ ಇನ್ ಅಪ್ಟೋಮೆಟ್ರಿ ಅಥವಾ ನೇತ್ರ ಸಹಾಯಕರಾಗಿ ಮಾನ್ಯತೆ ಪಡೆದ ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್‌ಪಿಸಿಬಿ ನಿಯಮಾನುಸಾರ ತರಬೇತಿ ಪಡೆದಿರಬೇಕು.
ಕಂಪ್ಯೂಟರ್ ಮತ್ತು ಇಂಟರ್‌ನೆಟ್ ಇತ್ಯಾದಿಗಳ ತರಬೇತಿಯಲ್ಲಿ ಉತ್ತೀರ್ಣರಾಗಿರಬೇಕು. 45 ವರ್ಷಗಳ ವಯೋಮಿತಿಯೊಳಗಿನವರಾಗಿರಬೇಕು. ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಕಂ ಅನುಭವ ಕಂ ಅರ್ಹತೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಧತ್ವ ನಿಯಂತ್ರಣ ವಿಭಾಗದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಮತ್ತು ಸ್ವವಿವರಗಳೊಂದಿಗೆ ಸೆ. 23 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-222382/ 8197094440 /9481691580.
ಕೊಡಗು ಸೆ.18ರಂದು ನೇರ ಸಂದರ್ಶನ: 2025-26ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಪಿಜಿಟಿ ಅರ್ಥಶಾಸ್ತ್ರ, ಟಿಜಿಟಿ ಇಂಗ್ಲಿಷ್, ಮೆಸ್ ಹೆಲ್ಪರ್, ಮೇಟ್ರನ್, ಎಂಟಿಎಸ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಕೊಡಗು ಜಿಲ್ಲೆಯ ಗಾಳಿಬೀಡು ಜೆಎನ್‌ವಿಯಲ್ಲಿ ಸೆಪ್ಟೆಂಬರ್ 18ರಂದು ಬೆಳಗ್ಗೆ 10.30 ಗಂಟೆಗೆ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9611862835, 9448215623 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪಿಎಂಶ್ರೀ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.