SK Home Ad
Home ನಮ್ಮ ಜಿಲ್ಲೆ ಮೈಸೂರು ಮೈಸೂರು ಪಬ್ ಅಗ್ನಿ ದುರಂತ: ಅಬಕಾರಿ ಜಿಲ್ಲಾಧಿಕಾರಿ ಅಮಾನತಿಗೆ ಶಿಫಾರಸು

ಮೈಸೂರು ಪಬ್ ಅಗ್ನಿ ದುರಂತ: ಅಬಕಾರಿ ಜಿಲ್ಲಾಧಿಕಾರಿ ಅಮಾನತಿಗೆ ಶಿಫಾರಸು

0
61

RSS ನೋಂದಣಿ ಆಗಲೇಬೇಕು; ಬಿಡದಿ ಟೌನ್‌ಶಿಪ್ ಯೋಜನೆಗೆ 80% ರೈತರ ಬೆಂಬಲ: ಯತೀಂದ್ರ ಸಿದ್ದರಾಮಯ್ಯ

ಸಂ.ಕ. ಸಮಾಚಾರ ಮೈಸೂರು: ನಗರದ ದಟ್ಟಗಳ್ಳಿ 4ನೇ ಹಂತದಲ್ಲಿರುವ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಇಬ್ಬರು ಸಜೀವ ದಹನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ!

ಪ್ರಾಥಮಿಕ ತನಿಖೆಯಲ್ಲಿ ಪಬ್ ಯಾವುದೇ ಮಾನ್ಯ ಲೈಸೆನ್ಸ್ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪಬ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಅಗ್ನಿಶಾಮಕ ಇಲಾಖೆಯ ಅನುಮೋದನೆ ಮತ್ತು ಅಗತ್ಯ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯದೇ ಕೆಲವು ವಾಣಿಜ್ಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದ ಸಚಿವರು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಕೇರಳದಲ್ಲಿ ನಿಫಾ ಆತಂಕ : ಸೋಂಕಿತನಿಗೆ ವೆಂಟಿಲೇಟರ್ ಬೆಂಬಲ

ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ಬೆಂಬಲ : ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಯೋಜನೆಗೆ ಶೇಕಡಾ 80ರಷ್ಟು ರೈತರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಭೂಸ್ವಾಧೀನಕ್ಕೆ ಒಳಪಡುವ ರೈತರಿಗೆ ಉತ್ತಮ ಪರಿಹಾರ ನೀಡಲಾಗುತ್ತಿದ್ದು, ಬಹುತೇಕ ರೈತರು ಪರಿಹಾರ ಸ್ವೀಕರಿಸಲು ಮುಂದಾಗಿದ್ದಾರೆ. ಕೆಲವರ ವಿರೋಧದ ಕಾರಣಕ್ಕೆ ಯೋಜನೆಯನ್ನು ಕೈಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ನಗರ ವೇಗವಾಗಿ ವಿಸ್ತರಿಸುತ್ತಿದ್ದು, ನಿವೇಶನಗಳ ಬೇಡಿಕೆಯೂ ಹೆಚ್ಚುತ್ತಿದೆ. ಹೀಗಾಗಿ ನಗರದ ವಿಸ್ತರಣೆಗೆ ಇಂತಹ ಯೋಜನೆಗಳು ಅಗತ್ಯವಾಗಿವೆ. ರೈತರೊಂದಿಗೆ ನಿರಂತರ ಮಾತುಕತೆ ನಡೆಸಿ, ಅವರ ವಿಶ್ವಾಸ ಗಳಿಸಿಕೊಂಡು ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಕೆಮ್ಮಿನ ಸಿರಪ್ ಮೇಲೆ ಕೇಂದ್ರದ ಕಟ್ಟುನಿಟ್ಟಿನ ಕ್ರಮ: ಸಾರ್ವಜನಿಕರಿಗೆ ಏನು ಬದಲಾವಣೆ?

RSS ವಿರುದ್ಧ ವಾಗ್ದಾಳಿ : ಆರ್‌ಎಸ್‌ಎಸ್ ಕುರಿತು ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಆ ಸಂಘಟನೆಯ ನಾಯಕರು ಹಿಂದೂ ಧರ್ಮದ ಪ್ರತಿನಿಧಿಗಳಲ್ಲ, ಕೇವಲ ಹಿಂದುತ್ವವಾದಿಗಳು ಎಂದು ಟೀಕಿಸಿದರು. ದೇಶದ ಯಾವುದೇ ಸಂಘಟನೆಯೂ ಕಾನೂನಿಗಿಂತ ದೊಡ್ಡದಲ್ಲ. ಆರ್‌ಎಸ್‌ಎಸ್ ದೇಶದಾದ್ಯಂತ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಹೊಂದಿದ್ದು, ಅದರ ಹಣಕಾಸು ವ್ಯವಹಾರಗಳ ಕುರಿತು ಪಾರದರ್ಶಕತೆ ಇರಬೇಕು ಎಂದು ಹೇಳಿದರು.

ಸಂಘಟನೆಗೆ ಬರುವ ಹಣ ಮತ್ತು ಆಸ್ತಿಗಳ ಲೆಕ್ಕಪತ್ರಗಳ ಬಗ್ಗೆ ಪರಿಶೀಲನೆ ಅಗತ್ಯವಿದ್ದು, ಆರ್‌ಎಸ್‌ಎಸ್ ಕಡ್ಡಾಯವಾಗಿ ನೋಂದಣಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಗೃಹ ಸಚಿವರ ನೋಂದಣಿ ಕುರಿತ ನಿಲುವನ್ನು ಸಮರ್ಥಿಸಿಕೊಂಡ ಸಚಿವರು, ಎಲ್ಲ ಸಂಘಟನೆಗಳು ದೇಶದ ಕಾನೂನು ವ್ಯಾಪ್ತಿಯಲ್ಲೇ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.