ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಸೋನಿಯಾ ಗಾಂಧಿ?, ಸುದ್ದಿ ವೈರಲ್

2
113

ಮೈಸೂರು: ಮೈಸೂರು ದಸರಾ 2025ರ ಸಿದ್ಧತೆಗಳು ನಡೆಯುತ್ತಿವೆ. ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಮೊದಲ ತಂಡ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಈಗಾಗಲೇ ಮೈಸೂರು ನಗರಕ್ಕೆ ಆಗಮಿಸಿವೆ. ಈ ಬಾರಿ ಒಟ್ಟು 11 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ 11 ದಿನಗಳ ಕಾಲ ಈ ಬಾರಿಯ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಆದರೆ ದಸರಾವನ್ನು ಯಾರು ಉದ್ಘಾಟನೆ ಮಾಡಲಿದ್ದಾರೆ? ಎಂಬುದು ಇನ್ನೂ ಅಂತಿಮವಾಗಿಲ್ಲ.

ಆದರೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈ ಬಾರಿಯ ದಸರಾ ಉದ್ಘಾಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಜನರು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಸ್ಪಷ್ಟನೆಯನ್ನು ನೀಡಿದೆ. ‘2025ರ ದಸರಾ ಮಹೋತ್ಸವವನ್ನು ಕಾಂಗ್ರೆಸ್‌ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.

‘ಇದು ಸುಳ್ಳು ಸುದ್ದಿಯಾಗಿದ್ದು, ಸತ್ಯಕ್ಕೆ ದೂರವಾಗಿದೆ. ಈ ರೀತಿಯ ಉದ್ದೇಶವಾಗಲಿ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ’ ಎಂದು ಸರ್ಕಾರ ಹೇಳಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯ ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿ ಕರೆಸುತ್ತಿದ್ದಾರೆ ಎಂದು ಕೆಲವು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು. ಇದಕ್ಕೆ ಹಲವಾರು ಜನರು ಕಮೆಂಟ್ ಸಹ ಹಾಕಿದ್ದರು. ಕರ್ನಾಟಕದಲ್ಲಿ ಯಾವುದೇ ಸಾಧಕರು ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದರು.

ಮೈಸೂರು ದಸರಾ 2025ರ ಉದ್ಘಾಟನೆ ಯಾರಿಂದ ಮಾಡಿಸಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾಡಳಿತದ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತಾರೆ. ಶುಕ್ರವಾರದ ತನಕ ದಸರಾ ಯಾರು ಉದ್ಘಾಟಿಸಲಿದ್ದಾರೆ ಎಂದು ಸರ್ಕಾರ ಘೋಷಣೆ ಮಾಡಿಲ್ಲ.

ಈ ಬಾರಿಯ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಕನ್ನಡ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಘೋಷಣೆಯಾಗಬೇಕಿದೆ.

ಬಾನು ಮುಷ್ತಾಕ್ ‘ಹೃದಯ ದೀಪ’ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷದ ವಿಚಾರ. ಅವರು ಹೋರಾಟದ ಹಿನ್ನೆಲೆಯಿಂದ ಬಂದವರು. ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಆದ್ದರಿಂದ ಅವರನ್ನು ದಸರಾ ಉದ್ಘಾಟನೆಗೆ ಕರೆಸಬೇಕು ಎಂದು ಬೇಡಿಕೆ ಇಡಲಾಗಿದೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ 2025ರ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ.

Previous articleಕನ್ನಡ ಚಿತ್ರರಂಗಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ
Next articleಹುಬ್ಬಳ್ಳಿ: ಕ್ಯಾಸಿನೋ ಉದ್ಯಮಿ‌ ಮನೆ ಮೇಲೆ ಇಡಿ ದಾಳಿ

2 COMMENTS

  1. ಸಿದ್ದರಾಮಯ್ಯ ನವರೇ, ಬಾನು ಮುಷ್ತಾಕ್ ರವರು ಬೂಕರ್ ಪ್ರಶಸ್ತಿಯನ್ನು ಪಡೆದಿರುವುದು ಒಂದು ಲೇಖನದ ಕನ್ನಡ ಅನುವಾದಕ್ಕಾಗಿಯೇ ಹೊರತು ಅದರ ಮೂಲ ಕೃತಿ ರಚನಕಾರರನ್ನು ನಿರ್ಲಕ್ಷ್ಯ ಮಾಡಿರುವುದು ಅಪರಾಧವಲ್ಲವೇ. ಅವರೂ ಕನ್ನಡ ಚಳುವಳಿಯಲ್ಲಿ ಭಾಗವಹಿಸಿದ್ದಾರೆಂದಿರಿ ಆದರೆ ಅವರು ಕನ್ನಡದ ತಾಯಿ ಭುವನೇಶ್ವರಿಯನ್ನೇ ಒಪ್ಪಿದರು, ಮತ್ತು ಕನ್ನಡ ಬಾವುಟದಲ್ಲಿನ ಕೆಂಪು ಮತ್ತು ಹಳದಿ ಬಣ್ಣದ ಬಗ್ಗೆ ಹರಿಶಿಣ ಕುಂಕುಮ ಸಂಕೇತ ನೀಡಿದ್ದಾರೆ ಎಂದು ಅಲ್ಪ ಸಂಖ್ಯಾತಳಾದ ನಾನು ಅದನ್ನು ಒಪ್ಪಬೇಕೇ ಎಂದು ಪ್ರಶ್ನಿಸಿರುವುದೂ ವಿವಾದವನ್ನೇ ಅಲ್ಲವೇ. ಇಂತಹವರಿಂದ ಧಾರ್ಮಿಕ ಕಾರ್ಯಕ್ರಮವನ್ನು ಕಟ್ಟರ್ ಇಸ್ಲಾಮಿಕಳಾದ ಬಾನು ಮುಷ್ತಾಕ್ ಅವರಿಂದ ದಸರಾ ಮಹೋತ್ಸವದ ಉದ್ಘಾಟನೆ ಮಾಡಿಸೋದಕ್ಕೆ ನಮ್ಮ ಉಘ್ರ ವಿರೋಧವಿದೆ.

  2. ಸಿದ್ದರಾಮಯ್ಯ ನವರೇ, ಬಾನು ಮುಷ್ತಾಕ್ ರವರು ಬೂಕರ್ ಪ್ರಶಸ್ತಿಯನ್ನು ಪಡೆದಿರುವುದು ಒಂದು ಲೇಖನದ ಕನ್ನಡ ಅನುವಾದಕ್ಕಾಗಿಯೇ ಹೊರತು ಅದರ ಮೂಲ ಕೃತಿ ರಚನಕಾರರನ್ನು ನಿರ್ಲಕ್ಷ್ಯ ಮಾಡಿರುವುದು ಅಪರಾಧವಲ್ಲವೇ. ಅವರೂ ಕನ್ನಡ ಚಳುವಳಿಯಲ್ಲಿ ಭಾಗವಹಿಸಿದ್ದಾರೆಂದಿರಿ ಆದರೆ ಅವರು ಕನ್ನಡ ತಾಯಿ ಭುವನೇಶ್ವರಿಯನ್ನೇ ಒಪ್ಪದವರು, ಮತ್ತು ಕನ್ನಡ ಬಾವುಟದಲ್ಲಿನ ಕೆಂಪು ಮತ್ತು ಹಳದಿ ಬಣ್ಣದ ಬಗ್ಗೆ ಹರಿಶಿಣ ಕುಂಕುಮ ಸಂಕೇತ ನೀಡಿದ್ದಾರೆ ಎಂದು ಕ್ಯಾತೆ ತೆಗೆದು ಅಲ್ಪ ಸಂಖ್ಯಾತಳಾದ ನಾನು ಅದನ್ನು ಒಪ್ಪಬೇಕೇ ಎಂದು ಪ್ರಶ್ನಿಸಿರುವುದೂ ವಿವಾದವನ್ನೇ ಶೃಷ್ಟಸಿದಂತೆ ಅಲ್ಲವೇ. ಹಿಂದೂ ಧಾರ್ಮಿಕ ಕಾರ್ಯಕ್ರಮವನ್ನು ಇಂತಹ ಕಟ್ಟರ್ ಇಸ್ಲಾಮಿಕಳಾದ ಬಾನು ಮುಷ್ತಾಕ್ ಅವರಿಂದ ದಸರಾ ಮಹೋತ್ಸವದ ಉದ್ಘಾಟನೆ ಮಾಡಿಸೋದಕ್ಕೆ ನಮ್ಮ ಉಘ್ರ ವಿರೋಧವಿದೆ.

LEAVE A REPLY

Please enter your comment!
Please enter your name here