ಅರಸು ದಾಖಲೆ ಮುರಿಯುತ್ತಿರುವ ಸಿದ್ದರಾಮಯ್ಯ ಏಕೆ ಹೀಗಂದ್ರು?

0
32

ಮೈಸೂರು: ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಅವರು, ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಅವಿರೋಧವಾಗಿಯೂ ಆಯ್ಕೆಯಾಗಿದ್ದರು. ಆ ಕಾಲವೇ ಬೇರೆ, ಈ ಕಾಲವೇ ಬೇರೆ ಎಂದರು.

ಅಂದು ಜನರೇ ದುಡ್ಡು ಕೊಟ್ಟು, ವೋಟು ಕೊಟ್ಟು ಗೆಲ್ಲಿಸುತ್ತಿದ್ದರು. ಆದರೆ, ಇಂದು ಎಲ್ಲವೂ ಬದಲಾಗಿದೆ. ನಾನೂ ಯಾವತ್ತು ಮುಖ್ಯಮಂತ್ರಿ ಆಗಬೇಕು, ಮಿನಿಸ್ಟರ್‌ ಆಗಬೇಕು ಎಂದು ಅಂದುಕೊಂಡವನಲ್ಲ. ಏನೋ ಇಲ್ಲಿಯವರೆಗೆ ಬಂದಿದ್ದೇನೆ. ಆದರೆ ಇಂದಿನ ರಾಜಕಾರಣ ಎಲ್ಲವೂ ಬದಲಾಗಿದೆ. ಬದಲಾವಣೆ ಆಗುತ್ತಿರುತ್ತದೆ ಎಂದರು.

ಇದನ್ನೂ ಓದಿ: ಬಳ್ಳಾರಿ ಗಲಭೆ ಪ್ರಕರಣ: FSL ತಂಡಕ್ಕೆ ಮತ್ತೊಂದು ಬುಲೆಟ್ ಪತ್ತೆ

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ. ತಾಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಎಂಎಲ್‌ಎ ಆಗಬೇಕು ಎನ್ನುವುದನ್ನು ಬಿಟ್ಟರೆ ಬೇರೆ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 9 ಬಾರಿ ಗೆಲುವು ಸಾಧಿಸಿದ್ದೇನೆ ಎಂದರು.

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು ಎಂದರು.

Previous articleರೆಡ್ಡಿ ಮುಗಿಸುವ ಸಂಚಿನಿಂದ ಗುಂಡಿನ ಮಳೆಯನ್ನೇ ಸುರಿಸಲಾಗಿದೆ
Next articleಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಎಫ್‌ಐಆರ್