Home ನಮ್ಮ ಜಿಲ್ಲೆ ಬೆಂಗಳೂರಲ್ಲಿ ಶುಕ್ರವಾರ ರಾಹುಲ್ ಗಾಂಧಿ ಪ್ರತಿಭಟನೆ, ಸಂಚಾರ ಮಾರ್ಗ ಬದಲು

ಬೆಂಗಳೂರಲ್ಲಿ ಶುಕ್ರವಾರ ರಾಹುಲ್ ಗಾಂಧಿ ಪ್ರತಿಭಟನೆ, ಸಂಚಾರ ಮಾರ್ಗ ಬದಲು

0

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಕುರಿತು ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದ ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 5ರಂದು ನಿಗದಿಯಾಗಿದ್ದ ಕಾರ್ಯಕ್ರಮವನ್ನು ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿತ್ತು.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಆಗಸ್ಟ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಬಳಿಕ ನಾಯಕರು ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿ ಸಲ್ಲಿಕೆ ಮಾಡಲಿದ್ದಾರೆ.

ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಾವಿರಾರು ಜನರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರು ನಗರದಲ್ಲಿ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಗಳ್ಳತನ ನಡೆದಿದೆ ಎಂದು ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚುನಾವಣಾ ಆಯೋಗ ಈಗಾಗಲೇ ಈ ಆರೋಪಗಳನ್ನು ತಳ್ಳಿ ಹಾಕಿದೆ. ಆದರೆ ಕಾಂಗ್ರೆಸ್ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಫ್ರೀಡಂ ಪಾರ್ಕ್ ಬೆಂಗಳೂರು ನಗರದ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ. ಆಗಸ್ಟ್ 8ರ ಪ್ರತಿಭಟನೆ ಹಿನ್ನಲೆಯಲ್ಲಿ ಸಂಚಾರಿ ಪೊಲೀಸರು ವಾಹನಗಳ ಮಾರ್ಗ ಬದಲಾವಣೆ ಮಾಡಿದ್ದಾರೆ.

ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ. ಜನರು ಸಹಕಾರ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ

ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್ ನಿಂದ ಸರ್ಕಲ್‌ನಿಂದ ಆನಂದ ರಾವ್ ಫ್ಲೈ ಓವರ್, ಓಲ್ಡ್ ಜೆ.ಡಿ.ಎಸ್. ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚಾರ ನಡೆಸುವ ವಾಹನಗಳು ಲುಲ ಮಾಲ್, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಫೈ ಓವರ್, ರೇಸ್ ಕೋರ್ಸ್ ರಸ್ತೆ ಮೂಲಕ ಸಂಚರಿಸುವುದು.

ಮೈಸೂರು ಬ್ಯಾಂಕ್‌ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ. ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಫ್ಲೈ ಓವರ್ ರಸ್ತೆ ಮೂಲಕ ಸಂಚರಿಸುವುದು.

ಚಾಲುಕ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಕಡೆಗೆ ಚಾಲುಕ್ಯ ಸರ್ಕಲ್, ಎಲ್‌ಆರ್‌ಡಿ, ರಾಜಭವನ ರಸ್ತೆ, ಇನ್ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ನಿಂದ ತೆರಳುವುದು.

ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್‌ ಕಡೆಗೆ ಸಂಚರಿಸಬಹುದಾಗಿದೆ.

ಮೌರ್ಯ/ ಸುಬ್ಬಣ್ಣ ಜಂಕ್ಷನ್ ನಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version