Home ನಮ್ಮ ಜಿಲ್ಲೆ ಮತ ಕಳ್ಳತನ : ಚುನಾವಣಾ ಆಯೋಗಕ್ಕೆ ಕುಮಾರಸ್ವಾಮಿ ಮನವಿ ಏನು?

ಮತ ಕಳ್ಳತನ : ಚುನಾವಣಾ ಆಯೋಗಕ್ಕೆ ಕುಮಾರಸ್ವಾಮಿ ಮನವಿ ಏನು?

0

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಸೇರದಂತೆ ಹಲವು ರಾಜ್ಯಗಳಲ್ಲಿ ಅಕ್ರಮ ನಡೆದಿದ್ದು ಮತ ಕಳ್ಳತನ ಆಗಿವೆ ಎಂಬುದು ಆರೋಪ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಮಂಡ್ಯ ಸಂಸದ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಹೇಳಿದ್ದಾರೆ.

ಘೋರ ಷಡ್ಯಂತ್ರ್ಯ: ಕರ್ನಾಟಕ ಸೇರದಂತೆ ವಿವಿಧ ರಾಜ್ಯಗಳಲ್ಲಿ ಮತ ಕಳ್ಳತನ ನಡೆದಿದೆ ಎಂದಿರುವ ರಾಹುಲ್‌ ಗಾಂಧಿ ಮಾತುಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಪೋಸ್ಟ್ ಹಾಕಿದ್ದಾರೆ.

ರಾಹುಲ್‌ ಗಾಂಧಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ 1,00,250 ಮತಗಳನ್ನು ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮತ ಕಳ್ಳತನ ಮಾಡಲಾದ ಬಗ್ಗೆ ವಿವರ ನೀಡಿದ್ದರು. ಸಾವಿರಾರು ನಕಲಿ ಹೆಸರುಗಳು, ನಕಲಿ ವಿಳಾಸಗಳು ಮತ್ತು ಮತದಾರರ ನಮೂನೆಗಳ ದುರುಪಯೋಗ ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದಿದ್ದರು.

ಕೇಂದ್ರ ಸಚಿವ ಕುಮಾರಸ್ವಾಮಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದಿದ್ದಾರೆ.

ಆಯೋಗಕ್ಕೆ ಸಲಹೆಯನ್ನು ನೀಡಿರುವ ಅವರು ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದು ಹೇಳಿದ್ದಾರೆ. ಮುಂದುವರೆದು ನನ್ನ ಮನವಿ ಅಥವಾ ಒತ್ತಾಯ ಇಷ್ಟೇ, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

ಶುಕ್ರವಾರ ಮತ ಕಳ್ಳತನದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 5ರಂದು ನಿಗದಿಯಾಗಿದ್ದ ಕಾರ್ಯಕ್ರಮವನ್ನು ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಚುನಾವಣಾ ಅಕ್ರಮವನ್ನು ಖಂಡಿಸಿ ಬೆಳಗ್ಗೆ 11:30 ರಿಂದ ನಗರದ ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಪ್ರತಿಭಟನೆ ಹಿನ್ನಲೆಯಲ್ಲಿ ಸಂಚಾರಿ ಪೊಲೀಸರು ವಾಹನಗಳ ಮಾರ್ಗ ಬದಲಾವಣೆ ಮಾಡಿದ್ದಾರೆ. ನವದೆಹಲಿಯಲ್ಲಿ ಮತ ಕಳ್ಳತನದ ಸ್ಫೋಟಕ ದಾಖಲೆಯನ್ನು ರಾಹುಲ್‌ ಗಾಂಧಿ ಬಿಡುಗಡೆ ಮಾಡಿದ್ದರು. ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version