Home Advertisement
Home ನಮ್ಮ ಜಿಲ್ಲೆ ರಾಯಚೂರು ವಿದ್ಯುತ್‌ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ಸಾವು

ವಿದ್ಯುತ್‌ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ಸಾವು

0
3

ರಾಯಚೂರು: ವಿದ್ಯಾರ್ಥಿನಿಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಿಂಧನೂರು ತಾಲೂಕಿನ ಕುರುಕುಂದ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದಿದೆ.

5ನೇ ತರಗತಿ ವಿದ್ಯಾರ್ಥಿನಿ ತನುಶ್ರಿ ಶ್ಯಾಮಣ್ಣ ಭಜಂತ್ರಿ (11) ಮೃತ ಎಂದು ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮುಂಜಾನೆ 11.30ರ ಸುಮಾರಿಗೆ ಶಾಲಾ ವಿರಾಮ ಸಮಯದಲ್ಲಿ ಕುಡಿಯಲು ನೀರು ತರಲು ತೆರಳಿದ್ದ ವೇಳೆ ವಿದ್ಯುತ್‌ ತಗುಲಿದ್ದು, ಕೂಡಲೇ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಹಯಗ್ರೀವನ ‘ಮೊದಲನೇ ಮಾತು’ ಮೊದಲ ಹಾಡಿಗೆ ಮುಹೂರ್ತ
Next articleಪಾಶ್ಚಿಮಾತ್ಯ ಸಂಸ್ಕೃತಿಯ ಅಂಧಾನುಕರಣೆ ನಿಲ್ಲಿಸಿ