SK Home Ad
Home ನಮ್ಮ ಜಿಲ್ಲೆ ರಾಯಚೂರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು

0
58

ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಹೈದ್ರಾಬಾದ್ ಮೂಲದ ಬಾಲಕ ಯುವನಚಂದ್ರ (5), ಸತೀಶ (35), ಮಂತ್ರಾಲಯ ಮೂಲದ ರಾಘವೇಂದ್ರ (25), ಧನುಷ್ಯ (22) ಹಾಗೂ ಸಂಧ್ಯಾ ಮೃತರು ಎಂದು ಗುರುತಿಸಲಾಗಿದೆ.

ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮಕ್ಕಾಗಿ ಬಂದಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆಯಲ್ಲಿ ಯುವತಿ ಅಪರ್ಣಾ ಎಂಬುವರು ಪಾರಾಗಿದ್ದಾರೆ.

ನದಿಯಲ್ಲಿ ನೀರಿನ ಆಳ ತಿಳಿಯದೇ ಈಜಲು ತೆರಳಿ ನೀರುಪಾಲಾಗಿದ್ದಾರೆ. ಸ್ಥಳದಲ್ಲಿ ಪೊಲೀಸರು, ಮೀನುಗಾರರಿಂದ ಹುಡುಕಾಟ ನಡೆದಿದ್ದು ಧನುಷ್ ಮೃತ ದೇಹ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ. ನದಿಯಲ್ಲಿ ನೀರುಪಾಲಾದವರ ಹುಡುಕಾಟ ವೇಳೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.