ರಾಯಚೂರು: ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಂದಿಸಬೇಕು. ಆದರೆ, ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದರೂ ಕೆಲವೇ ಅಧಿಕಾರಿಗಳ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿ, ಜಿಪಂ ಸಿಇಒ ಅವರು ಗೈರಾಗಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಾಯಚೂರಿನಲ್ಲಿ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಹಿಳಾ ಸ್ಪಂದನಾ ಕಾರ್ಯಕ್ರಮ, ಮಹಿಳಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಪೋಷಣಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಬೇಸರ ವ್ಯಕ್ತಪಡಿಸಿದರು.
ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಆದರೆ, ಜಿಲ್ಲೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಅಧಿಕಾರಿಗಳಿಲ್ಲ. ಅಲ್ಲದೇ ಜಿಲ್ಲೆಯಲ್ಲಿಯೂ ಕಳೆದ ಮೂರು ದಿನಗಳಿಂದ
ಪ್ರವಾಸ ಮಾಡಿದ್ದೇನೆ. ಮಹಿಳಾ ಆಯೋಗ ಅಧ್ಯಕ್ಷರು ಬಂದರೂ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಸಿಇಒ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸ್ಪಂದನೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.