Home ನಮ್ಮ ಜಿಲ್ಲೆ ರಾಮನಗರ ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ

ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ

0

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹೇಳಿದರು.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಹಲವಾರು ರೀತಿಯ ಚರ್ಚೆಗಳು ಆಗುತ್ತಿವೆ. ಅವೆಲ್ಲವೂ ಊಹಾಪೋಹಗಳು. ಆದರೆ ಮೈತ್ರಿ ಬಗ್ಗೆ ಸಭೆ ನಡೆಯಲಿದೆ. ಸಭೆಯಲ್ಲಿ ಚರ್ಚೆ ನಡೆಯಲಿದೆ ಚರ್ಚೆ ಬಳಿಕ ವಾಸ್ತವಾಂಶ ಹೊರಬರಲಿದೆ ಎಂದರು.

Exit mobile version