Home ನಮ್ಮ ಜಿಲ್ಲೆ ರಾಮನಗರ ಆರು ತಿಂಗಳೊಳಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ: ಎಚ್‌ಡಿಕೆ ಭವಿಷ್ಯ

ಆರು ತಿಂಗಳೊಳಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ: ಎಚ್‌ಡಿಕೆ ಭವಿಷ್ಯ

0

ರಾಮನಗರ: ನವೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳು ಆಗಲಿವೆ, ಕಾಯ್ದು ನೋಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದರು.
ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಸೇರಿದಂತೆ ಯಾವುದೇ ಯೋಜನೆಯನ್ನು ಜಾರಿಗೆ ತರುವುದು ಸುಲಭವಲ್ಲ. ಯೋಜನೆಗಳಿಗೆ 60 ರಿಂದ 70 ಸಾವಿರ ಕೋಟಿ ರೂ. ಬೇಕು. ಅವರು ಎಲ್ಲಿಂದ ಅನುದಾನ ತರುತ್ತಾರೆ?. ಈ ಸರ್ಕಾರದ ಬಗ್ಗೆ ಯಾವುದೇ ಕಾರಣಕ್ಕೂ ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದರು.

Exit mobile version