Home Advertisement
Home ನಮ್ಮ ಜಿಲ್ಲೆ ರಾಮನಗರ ರೈಲು ನಿಲ್ದಾಣ ಸ್ಫೋಟಿಸುವ ಬೆದರಿಕೆ

ರೈಲು ನಿಲ್ದಾಣ ಸ್ಫೋಟಿಸುವ ಬೆದರಿಕೆ

0
162

ಬಾಂಬ್ ಬೆದರಿಕೆ ಕರೆ: ಬಾಂಬ್ ನಿಷ್ಕ್ರೀಯ, ಶ್ವಾನದಳದಿಂದ ಪರಿಶೀಲನೆ

ರಾಮನಗರ: ಜಿಲ್ಲೆಯ ಬಿಡದಿ ರೈಲು ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ.
ಬೆಂಗಳೂರು ರೈಲ್ವೆ ಕಂಟ್ರೋಲ್ ರೂಂಗೆ ತಡರಾತ್ರಿ ಕರೆ ಮಾಡಿರುವ ದುಷ್ಕರ್ಮಿಗಳು, ಬಿಡದಿ ರೈಲು ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ರೈಲ್ವೆ ಫ್ಲಾಟ್​ಫಾರಂನಲ್ಲಿ ಪರಿಶೀಲನೆ ನಡೆಸಿದ್ದು, ಅದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ದೃಢಪಟ್ಟಿದೆ. ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಡಿವೈಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ. ಬಿಡದಿ ರೈಲ್ವೆ ನಿಲ್ದಾದಲ್ಲಿ ಎಲ್ಲಾ ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, ರೈಲ್ವೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮೇಲೂ ನಿಗಾ ಇರಿಸಲಾಗಿದೆ.

Previous articleನ್ಯೂಜಿಲೆಂಡ್‌ನ ಕರಾವಳಿಯಲ್ಲಿ 6.8 ತೀವ್ರತೆಯ ಭೂಕಂಪ
Next articleಮಾರ್ಚ್ 26ರಂದು ಬೃಹತ ಟ್ರಾಕ್ಟರ್ ಜಾಥಾ