ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಹಾಕುವೆ

0
7

ಶಿವಮೊಗ್ಗ: ಪದೇ ಪದೆ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಮುಖ್ಯಮಂತ್ರಿ ಆಗಲು ಯೋಜನೆ ನಡೆದಿದ್ದು, ಡಿಕೆಶಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿಗೆ ಕರೆದೊಯ್ದು ವಿಜಯೇಂದ್ರ ಚರ್ಚೆ ನಡೆಸಿದ್ದಾರೆ ಎಂಬ ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.

ಯತ್ನಾಳ್ ನನ್ನ ಬಗ್ಗೆ ಮಾತನಾಡದಿದ್ದರೆ ಅವರಿಗೆ ಊಟ ಸೇರುವುದಿಲ್ಲ. ನನ್ನ ತಾಳ್ಮೆಗೂ ಮಿತಿ ಇದೆ, ಆದ್ದರಿಂದ ಇಂತಹ ಸುಳ್ಳು ಆರೋಪದ ವಿರುದ್ಧ ರೂ. 1 ಇಲ್ಲವೆ ರೂ. 1 ಕೋಟಿ ಪರಿಹಾರ ಕೋರಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಯೋಚನೆ ಮಾಡುತ್ತಿದ್ದೇನೆ ಎಂದರು.

ಇದನ್ನೂ ಓದಿ: ಕೈʼಯಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆಶಿಗೆ ಇಕ್ಬಾಲ್ ಜ. 6 ಮುಹೂರ್ತ!

ಅಧಿವೇಶನ ಮುಂದೂಡಿ: ರಾಜ್ಯದ ಹಿತದೃಷ್ಟಿಯಿಂದ ಸಮಗ್ರವಾಗಿ ಚರ್ಚಿಸಲು ಅಧಿವೇಶನ ಕರೆಯಿರಿ, ನಾಯಕತ್ವಕ್ಕಾಗಿ ಪೈಪೋಟಿ ಮಾಡುತ್ತಿರುವುದರಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ನಾಯಕತ್ವ ಸಮಸ್ಯೆ ಬಗೆಹರಿಯುವ ತನಕ ಅಧಿವೇಶನ ಮುಂದೂಡಬೇಕೆಂದು ಮುಖ್ಯಮಂತ್ರಿಗೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದರು.

ಯತೀಂದ್ರ ಕಾಂಗ್ರೆಸ್ ಹೈಕಮಾಂಡ್: ಮುಖ್ಯಮಂತ್ರಿ ಕುರ್ಚಿ ಗದ್ದಲದಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯವನ್ನು ಸಂಪೂರ್ಣ ಮರೆತಿದೆಯಲ್ಲದೆ, ರೈತರ ಹಿತ ಕಡೆಗೆಣಿಸಿದೆ. ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ನಂತೆ ಯತೀಂದ್ರ ಹೇಳಿಕೆ ನೀಡುತ್ತಿದ್ದಾರೆ. ಸ್ವತಃ ಕಾಂಗ್ರೆಸ್ ಶಾಸಕರೇ ಖಾಸಗಿಯಾಗಿ ಮಾತನಾಡುವಾಗ `ಯತೀಂದ್ರ ಅವರನ್ನು ಪಕ್ಷದ ಹೈಕಮಾಂಡ್’ ಎಂದು ವ್ಯಂಗವಾಡುತ್ತಾರೆ ಎಂದರು.

Previous articleಕೈʼಯಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆಶಿಗೆ ಇಕ್ಬಾಲ್ ಜ. 6 ಮುಹೂರ್ತ!
Next articleಆಳಂದ ಮತಗಳವು ಕೇಸಲ್ಲಿ ಗುತ್ತೇದಾರ್, ಪುತ್ರ ಆರೋಪಿ