SK Home Ad
Home ನಮ್ಮ ಜಿಲ್ಲೆ ಶಿವಮೊಗ್ಗ ಜೈಲಿನಲ್ಲಿ ಇರಬೇಕಾದವರು ಡಿಕೆಶಿ ಕ್ಯಾಬಿನೆಟ್‌ನಲ್ಲಿದ್ದಾರೆ: ಈಶ್ವರಪ್ಪ

ಜೈಲಿನಲ್ಲಿ ಇರಬೇಕಾದವರು ಡಿಕೆಶಿ ಕ್ಯಾಬಿನೆಟ್‌ನಲ್ಲಿದ್ದಾರೆ: ಈಶ್ವರಪ್ಪ

0
42

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಧರ್ಮಾಂದರು, ಹಿಂದೂ ಧರ್ಮದವರ ಮನಸ್ಸಿಗೆ ಧಕ್ಕೆ ತರುವವರು ಇದ್ದಾರೆ. ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಗಳಿಗೆ ಹೋಗುವುದಿಲ್ಲ ಎಂದಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿ, ಜೈಲಿಗೆ ಕಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಗ್ಯರ ಕೈಯಲ್ಲಿ ಉನ್ನತ ಶಿಕ್ಷಣ ಖಾತೆ ಸಿಕ್ಕಿದೆ. ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ರಾಯರಡ್ಡಿ ಹೇಳಿದ್ದಾರೆ. ಇವರಿಗೆ ಮಠ-ಮಂದಿರಗಳಿಗೆ ಹೋಗುವಂತೆ ಹೇಳಿದವರು ಯಾರು? ಹಿಂದೂ ಧರ್ಮದ ಬಗ್ಗೆ ಇವರಿಗೆ ಗೊತ್ತಿದೆಯೇ..? ಎಂದು ಪ್ರಶ್ನಿಸಿದರು.

ಹಿಂದೂ ಧರ್ಮಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಇಂತಹ ಧರ್ಮದ ಬಗ್ಗೆ ಟೀಕೆ ಮಾಡುವ ಅಧಿಕಾರವನ್ನು ಅವರಿಗೆ ಕೊಟ್ಟವರು ಯಾರು ಎಂದು ಈಶ್ವರಪ್ಪ ಪ್ರಶ್ನಿಸಿದರು. ಸಚಿವರ ಹೇಳಿಕೆಯಿಂದ ಹಿಂದೂಗಳ ಮನಸ್ಸಿಗೆ ನೋವುಂಟಾಗಿದೆ. ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷಿಸಬೇಡಿ. ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರು ಬಸವರಾಜ ರಾಯರಡ್ಡಿ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.

ಜೈಲಿನಲ್ಲಿ ಇರಬೇಕಾದವರು ಸಿಎಂ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಇದ್ದಾರೆ. ಇವರು ಉನ್ನತ ಶಿಕ್ಷಣ ಇಲಾಖೆಯಲ್ಲಿ ಇರಲು ಅರ್ಹರಲ್ಲ. ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಅಷ್ಟೇ ಎಂದು ಖಾರವಾಗಿ ನುಡಿದರು.