ಭದ್ರಾ ಎಡ ದಂಡೆ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

0
1

ಶಿವಮೊಗ್ಗ: ಒಂದೇ ಕುಟುಂಬದ ನಾಲ್ವರು ಭದ್ರಾ ಎಡದಂಡೆ ನಾಲೆಯಲ್ಲಿ ಭಾನುವಾರ ನಾಪತ್ತೆಯಾಗಿದ್ದು, ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ಈ ಘಟನೆ ಸಂಭವಿಸಿದೆ. ಅರಬಿಳಚಿಯ ಜಾತ್ರೆಯ ಹಿನ್ನೆಲೆಯಲ್ಲಿ ಅಳಿಯ ಪರಶುರಾಮ್ ಮತ್ತು ಪತ್ನಿ ಶ್ವೇತಾ ಜೊತೆ ಮಾವನ ಮನೆಗೆ ಬಂದಿದ್ದರು. ತಾಯಿ ನೀಲಾಬಾಯಿ (50) ಮತ್ತು ಮಗ ರವಿ (21), ಶಿಕಾರಿಪುರ ಬೆಂಡೆಕಟ್ಟಿಯ ಅಳಿಯ ಪರಶುರಾಮ್ (33) ಮತ್ತು ಮಗಳಾದ ಶ್ವೇತಾ (28) ನೀರು ಪಾಲಾಗಿದ್ದಾರೆ.

ಭದ್ರಾ ಎಡದಂಡೆ ನಾಲೆಯಲ್ಲಿ ಬಟ್ಟೆ ಒಗೆಯಲು ತೆರಳಿದ್ದಾಗ ನೀರು ಪಾಲಾಗಿದ್ದಾರೆ. ನಾಲೆಗೆ ಜಾರಿ ಬಿದ್ದಾಗ ಒಬ್ಬರ ರಕ್ಷಣೆಗೆ ಮತ್ತೊಬ್ಬರು ಅವರ ಹಿಂದೆ ಇನ್ನೊಬ್ಬರು ಎಂಬಂತೆ ಬಿದ್ದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಹೆಚ್ಚುವರಿ ರಕ್ಷ ಣಾಧಿಕಾರಿ ಎ.ಜಿ. ಕಾರಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನೀರು ಪಾಲಾದವರ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿಯ ನೇತೃತ್ವದಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿತ್ತು. ನಾಲೆಯಲ್ಲಿ ಹೆಚ್ಚಿನ ನೀರು ಇರುವುದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿದ್ದು, ಸೋಮವಾರ ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Previous articleಸಚಿವ ಮಲ್ಲಿಕಾರ್ಜುನ ವಿರುದ್ಧ ರಾಜ್ಯಪಾಲರಿಗೆ ದೂರು