Home Advertisement
Home ನಮ್ಮ ಜಿಲ್ಲೆ ಶಿವಮೊಗ್ಗ ಮಣ್ಣು ಕುಸಿತ ದುರಂತ: ಮೃತರ ಕುಟುಂಬಗಳಿಗೆ CM ನೆರವು ಘೋಷಣೆ

ಮಣ್ಣು ಕುಸಿತ ದುರಂತ: ಮೃತರ ಕುಟುಂಬಗಳಿಗೆ CM ನೆರವು ಘೋಷಣೆ

0
76

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟ್ ನಲ್ಲಿ ನಡೆದ ಭೀಕರ ಮಣ್ಣು ಕುಸಿತ ದುರಂತದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ರಸ್ತೆ ಕಾಮಗಾರಿಯ ವೇಳೆ ದುರಂತ : ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿತ ಸಂಭವಿಸಿದೆ ಸ್ಥಳದಲ್ಲಿದ್ದ ಕಾರ್ಮಿಕರು ಅದರಡಿ ಸಿಲುಕಿದ್ದಾರೆ, ಈ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತರ ವಿವರ : ಮಣ್ಣು ಕುಸಿತದಲ್ಲಿ ಮೃತಪಟ್ಟವರು ರಾಘು (37) – ಚಕ್ಕಾರು ಗ್ರಾಮ, ರಾಜು (30) – ಹಾವೇರಿ ಜಿಲ್ಲೆಯ ನೆಲಗಲು ಗ್ರಾಮ, ಶಬ್ಬೀರ್ (40) – ಕಾರ್ಮಿಕ ಮೃತರಲ್ಲಿ ಇಬ್ಬರ ಶವ ಗುರುವಾರ ಪತ್ತೆಯಾಗಿದ್ದು, ಇನ್ನೊಬ್ಬರ ಮೃತದೇಹ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.

ಸಿಎಂ ಸಂತಾಪ : ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು “ಮೃತ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರಕಲಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಪರಿಹಾರ ಘೋಷಣೆ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

ಗಾಯಾಳುಗಳಿಗೆ ಚಿಕಿತ್ಸೆ: ಈ ದುರಂತದಲ್ಲಿ ಗಾಯಗೊಂಡ ಮೂವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.