Home Advertisement
Home ನಮ್ಮ ಜಿಲ್ಲೆ ಶಿವಮೊಗ್ಗ ಶಿವಮೊಗ್ಗ: ಜ್ಯೋತಿಷಿ ಕಮಲಾಕರ್ ಭಟ್ ಪೊಲೀಸ್ ವಶಕ್ಕೆ

ಶಿವಮೊಗ್ಗ: ಜ್ಯೋತಿಷಿ ಕಮಲಾಕರ್ ಭಟ್ ಪೊಲೀಸ್ ವಶಕ್ಕೆ

0
117

ಶಿವಮೊಗ್ಗ: ಕೊಲೆ ಹಾಗೂ ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಶಿವಮೊಗ್ಗ ಪೊಲೀಸರು ಎರಡು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ಆರೋಪಿಯನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ ತುಂಗಾನಗರ ಪೊಲೀಸ್ ಠಾಣೆ ಅಧಿಕಾರಿಗಳು, ವಿಚಾರಣೆ ನಂತರ ನ್ಯಾಯಾಲಯದಿಂದ ಪೊಲೀಸ್ ಕಸ್ಟಡಿ ಪಡೆಯಲು ಯಶಸ್ವಿಯಾಗಿದ್ದಾರೆ.

ಪ್ರಕರಣದ ಹಿನ್ನೆಲೆ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು, ಘಟನೆ ನಡೆದ ಸ್ಥಳದ ಆಧಾರದ ಮೇಲೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಇದೇ ವೇಳೆ, ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲೂ ಕಮಲಾಕರ್ ಭಟ್ ಪ್ರಮುಖ ಆರೋಪಿಯಾಗಿದ್ದಾರೆ. ಈ ಸಂಬಂಧ ಅವರನ್ನು ಕಾರವಾರ ಜೈಲಿನಿಂದ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ನ್ಯಾಯಾಲಯದ ಆದೇಶ : ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡುವಂತೆ ಆದೇಶಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಕಮಲಾಕರ್ ಭಟ್ ಅವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.