ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕೃಷ್ಣ (44) ಎಂಬುವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಮಧುಮೇಹದಿಂದ ಬಳಲುತ್ತಿದ್ದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳವಾರ ಮುಂಜಾನೆ ಸಾವನ್ನಪ್ಪಿದ್ದಾರೆ.
ಹೊಸನಗರ ತಾಲ್ಲೂಕು ಅಮೃತ ಗ್ರಾಮದ ಗರ್ತಿಕೆರೆಯವರು. ಈ ಹಿಂದೆ ಹಲವಾರು ಬಾರಿ ಮಧುಮೇಹಕ್ಕೆ ಚಿಕಿತ್ಸೆ ಪಡೆದಿದ್ದರು. ಏ. 29ರಂದು ವಿಚಾರಣಾ ವಿಭಾಗದಿಂದ ಶಿಕ್ಷಾ ವಿಭಾಗಕ್ಕೆ ವರ್ಗಾವಣೆಯಾಗಿದ್ದರು.
ಡಿ. 5ರಂದು ಅನಾರೋಗ್ಯ ಮತ್ತೆ ಮರುಕಳಿಸಿದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ಅಲ್ಲಿನ ವೈದ್ಯರು ಒಳರೋಗಿಯಾಗಿ ದಾಖಲು ಮಾಡಿಕೊಂಡು, ಚಿಕಿತ್ಸೆ ಮುಂದುವರೆಸಿದ್ದರು. ಆದರೆ ಮಂಗಳವಾರ ಬೆಳಗಿನ ಜಾವ 2 ಗಂಟೆಯ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಜೈಲಿನ ಅಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.






















