ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿ ಎಸ್‌ಐಟಿ ತನಿಖೆ ನಡೆಯುವಂತೆ ಮಾಡಿ, ಬಳಿಕ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮಾಸ್ಕ್‌ಮ್ಯಾನ್ ಚಿನ್ನಯ್ಯಗೆ ಕೊನೆಗೂ 24 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದ್ದು, ಸೋಗಾನೆಯ ಕೇಂದ್ರ ಕಾರಾಗೃಹದಿಂದ ಗುರುವಾರ ಬೆಳಗ್ಗೆ ಬಿಡುಗಡೆಯಾದರು.
ಚಿನ್ನಯ್ಯನಿಗೆ ನ. 24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಕೋರ್ಟ್ ಆದೇಶದಂತೆ 1 ಲಕ್ಷ ರೂಪಾಯಿ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರಲಿಲ್ಲ. ಚಿನ್ನಯ್ಯನ ಪತ್ನಿ ಮಲ್ಲಿಕಾ ಅವರು ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುಧವಾರ ಜಾಮೀನು ಪ್ರಕ್ರಿಯೆ ಮುಗಿಸಿದ ಬಳಿಕ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಆಗಿದ್ದಾರೆ.
ಇದನ್ನೂ ಓದಿ: ರೈಲ್ವೆ ಹಳಿಗಳ ಮೇಲೆ ನುಗ್ಗಿದ ಮಹೀಂದ್ರಾ ಥಾರ್: ಆಮೇಲೇನಾಯ್ತು?
ಚಿನ್ನಯ್ಯನ ಪತ್ನಿ ಮಲ್ಲಿಕಾ, ಆತನ ಸಹೋದರಿ, ಸಹೋದರಿಯ ಗಂಡ, ವಕೀಲರ ಕಾರಿನ ಚಾಲಕ ಜೈಲಿನ ಬಳಿ ಆತನನ್ನು ಕರೆದೊಯ್ಯಲು ಆಗಮಿಸಿದ್ದರು. ಅವರ ಜೊತೆ ಚಿನ್ನಯ್ಯ ಮಂಗಳೂರಿನ ಕಡೆ ಪ್ರಯಾಣ ಬೆಳೆಸಿದರು. ಪ್ರತಿ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕವುದು ಸೇರಿದಂತೆ ಹಲವು ಷರತ್ತುಗಳನ್ನು ಬೆಳ್ತಂಗಡಿ ನ್ಯಾಯಾಲಯವು ವಿಧಿಸಿದೆ.























