Home Advertisement
Home ನಮ್ಮ ಜಿಲ್ಲೆ ಶಿವಮೊಗ್ಗ ಶಿವಮೊಗ್ಗ: ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಶಿವಮೊಗ್ಗ: ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

0
176

ಶಿವಮೊಗ್ಗ: ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ಬಾಲಕಿ ಮಗುವಿನ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ ಶಿವಮೊಗ್ಗದಲ್ಲಿಯು ಇಂತಹುದೆ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ಎರಡು ದಿನದ ಹಿಂದೆ 9ನೇ ತರಗತಿಯ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 15 ವರ್ಷದ ಬಾಲಕಿಯೊಬ್ಬಳು ಈಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಎರಡು ದಿನದ ಹಿಂದೆ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳ ಗಂಡು ಶಿಶು 1.8 ಕೆ.ಜಿ ತೂಕವಿದೆ.

ಕೂಡಲೆ ಮಗು ಮತ್ತು ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ವಿಷಯ ತಿಳಿಯುತ್ತಿದ್ದಂತೆ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು ಬಾಲಕಿಯ ವಿಚಾರಣೆ ನಡೆಸಿದರು.

LEAVE A REPLY

Please enter your comment!
Please enter your name here