Home ನಮ್ಮ ಜಿಲ್ಲೆ ಶಿವಮೊಗ್ಗ ರಾಜ್ಯ ಕಾಂಗ್ರೆಸ್‌ನಲ್ಲಿ ಸೂಪರ್‌ ಸಿಎಂ, ಶ್ಯಾಡೋ ಸಿಎಂ

ರಾಜ್ಯ ಕಾಂಗ್ರೆಸ್‌ನಲ್ಲಿ ಸೂಪರ್‌ ಸಿಎಂ, ಶ್ಯಾಡೋ ಸಿಎಂ

0

ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ನಲ್ಲಿ ಅನೇಕರು ಸಿಎಂ ಆಗಲು ಕಾಯುತ್ತಿದ್ದಾರೆ. ಈಗಾಗಲೇ ಸೂಪರ್‌ ಸಿಎಂ, ಶ್ಯಾಡೋ ಸಿಎಂ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ, ಡಿಸಿಎಂ ಡಿ.ಕೆ. ಶಿವಕುಮಾರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ದೆಹಲಿ ಕಾಂಗ್ರೆಸ್‌ ನಾಯಕರಿಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ. ಬ್ರಿಟಿಷರ ಮನಸ್ಥಿತಿಯನ್ನು ಕಾಂಗ್ರೆಸ್‌ನವರು ಮುಂದುವರಿಸಿದ್ದಾರೆ. ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ. ದೇಶವನ್ನು ವಿಭಜಿಸುವ ಮಾತನ್ನು ಆಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರಿಗೆ ತಕ್ಕಪಾಠ ಕಲಿಸಬೇಕಿದೆ ಎಂದರು.

Exit mobile version