SK Home Ad
Home ನಮ್ಮ ಜಿಲ್ಲೆ ಶಿವಮೊಗ್ಗ ರಸ್ತೆ ಅಪಘಾತದಲ್ಲಿ ನವದಂಪತಿ ಸಾವು

ರಸ್ತೆ ಅಪಘಾತದಲ್ಲಿ ನವದಂಪತಿ ಸಾವು

0
32

ಶಿವಮೊಗ್ಗ: ಒಂದೂವರೆ ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ನವದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಸಾಗರ ರಸ್ತೆ ಸಮೀಪದ ರಿಂಗ್ ರೋಡ್‌ನಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಕಿರಣ್ ಜಿ. (28) ಹಾಗೂ ಅವರ ಪತ್ನಿ ಸೌಮ್ಯ (22) ಎಂದು ಗುರುತಿಸಲಾಗಿದೆ. ಕಿರಣ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕಿರಣ್ ಅವರು ತಮ್ಮ ಪತ್ನಿ ಸೌಮ್ಯ ಅವರೊಂದಿಗೆ ಶರಾವತಿ ನಗರದ ಮನೆಯಿಂದ ಗೋವಿಂದಪುರದಲ್ಲಿರುವ ಪತ್ನಿಯ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಾಗರ ರಸ್ತೆ ಬಳಿಯ ರಿಂಗ್ ರೋಡ್‌ನಲ್ಲಿ ಅವರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಕಿರಣ್ ಹಾಗೂ ಸೌಮ್ಯ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮದುವೆಯಾಗಿ ಒಂದೂವರೆ ತಿಂಗಳಿನಲ್ಲೇ ದಂಪತಿ ಸಾವನ್ನಪ್ಪಿರುವುದು ಕುಟುಂಬಸ್ಥರು, ಸಂಬಂಧಿಕರಲ್ಲಿ ತೀವ್ರ ದುಃಖ ಉಂಟುಮಾಡಿದೆ.

ಕೆಲ ಗೊಂದಲಗಳು, ಭಿನ್ನಾಭಿಪ್ರಾಯಗಳ ಬಳಿಕ ದಂಪತಿಯ ಅಂತ್ಯ ಸಂಸ್ಕಾರವನ್ನು ಒಟ್ಟಿಗೆ ಶರಾವತಿ ನಗರದ ಸ್ಮಶಾನದಲ್ಲಿ ನೆರವೇರಿಸಲಾಯಿತು. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.