ತಂದೆಯ ಸಾವಿನ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಸೂಡಿ ಫಾರಂನಲ್ಲಿ ಮನ ಮಿಡಿಯುವ ಘಟನೆಯೊಂದು ನಡೆದಿದ್ದು, ತಂದೆಯ ಸಾವಿನ ದುಃಖದಲ್ಲಿಯೇ ವಿದ್ಯಾರ್ಥಿನಿ ತಾರುಣ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಮಾನಸಿಕ ಧೈರ್ಯಕ್ಕೆ ಮಾದರಿಯಾಗಿದ್ದಾಳೆ. ತಾರುಣ್ಯ ತಂದೆ ತಂಗರಾಜ್ ಮತ್ತು ತಾಯಿ ಮೀನಾ ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಡೆಸುತ್ತಿದ್ದರು. ತಮ್ಮ ಇಬ್ಬರು ಪುತ್ರಿಯರು ಉತ್ತಮವಾಗಿ ಓದಿ ಬದುಕಿನಲ್ಲಿ ದೊಡ್ಡ ಸಾಧನೆ ಮಾಡಬೇಕು ಎಂಬುದು ತಂದೆಯ ಕನಸಾಗಿತ್ತು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ತಂಗರಾಜ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬವನ್ನು ಸಂಕಷ್ಟಕ್ಕೆ ತಳ್ಳಿದೆ. ಈ … Continue reading ತಂದೆಯ ಸಾವಿನ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ