SK Home Ad
Home ನಮ್ಮ ಜಿಲ್ಲೆ ಶಿವಮೊಗ್ಗ ವೇದಿಕೆ-ಪೆಂಡಾಲ್ ಸಿದ್ಧ: ಕಾರ್ಯಕ್ರಮ ನಡೆಯೋದೆ ಡೌಟ್

ವೇದಿಕೆ-ಪೆಂಡಾಲ್ ಸಿದ್ಧ: ಕಾರ್ಯಕ್ರಮ ನಡೆಯೋದೆ ಡೌಟ್

0
125

ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆ ನಡೆದು ತಮ್ಮ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಇದರ ಬಿಸಿ ಜೂನ್ 1ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯಬೇಕಾಗಿದ್ದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ತಟ್ಟಿದೆ. ವೇದಿಕೆ, ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಆದರೆ, ಕಾರ್ಯಕ್ರಮದ ಕುರಿತು ಅನಿಶ್ಚಿತತೆ ಮುಂದುವರಿದಿದೆ.

ರಾಜ್ಯದ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಶಂಕುಸ್ಥಾಪನೆ ಕಾರ್ಯಕ್ರಮ ನಿಗದಿಯಾಗಿತ್ತು. ಶಿಕ್ಷಣ ಇಲಾಖೆ ವತಿಯಿಂದ ನಡೆಯಬೇಕಿದ್ದ ಬೃಹತ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಬೇಕಿತ್ತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಇದೇ ವೇದಿಕೆಯಲ್ಲಿ ಸನ್ಮಾನಿಸುವುದು ಮತ್ತು ಆ ಮಕ್ಕಳ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಊಟ ಮಾಡಲು ಸಮಯ ನಿಗದಿಪಡಿಸಲಾಗಿತ್ತು. ಆದರೆ, ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕೂಗಿಗೆ ಬಲ ಬಂದಿದ್ದು, ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿದಿದ್ದಾರೆ.

ಡಿ.ಕೆ. ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಲಿದ್ದಾರೆಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಶಿವಮೊಗ್ಗದ ಕಾರ್ಯಕ್ರಮದ ಕುರಿತು ಗೊಂದಲಗಳು ಮುಂದುವರಿದಿವೆ. ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡ ಕಾರ್ಯಕ್ರಮದ ಕುರಿತಾಗಿ ಗೊಂದಲದಲ್ಲಿ ಇದ್ದು, ಸದ್ಯ ಫ್ರೀಡಂ ಪಾರ್ಕ್‌ನಲ್ಲಿ ಪೆಂಡಾಲ್ ನಿರ್ಮಾಣ ಕಾರ್ಯ ಕೂಡ ಸ್ಥಗಿತಗೊಂಡಿದೆ.

ಪೂರ್ವ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಲು ನಗರಕ್ಕೆ ಆಗಮಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ತಮ್ಮ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬುಧವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.