ಜೋಗದಲ್ಲಿ 2000 ಮೆ.ವ್ಯಾ. ವಿದ್ಯುತ್ ಉತ್ಪಾದನೆಗೆ ಕ್ರಮ: ಕೆ.ಜೆ. ಜಾರ್ಜ್

0
97

ಶಿವಮೊಗ್ಗ: ಮುಂದಿನ ಕೆಲವು ದಶಕಗಳ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಾಜ್ಯದಲ್ಲಿ ಬರಬಹುದಾದ ವಿದ್ಯುತ್ ಕೊರತೆಯನ್ನು ನೀಗಿಸಿ, ಸಮರ್ಪಕವಾಗಿ ವಿದ್ಯುತ್ ಸರಬರಾಜುಗೊಳಿಸಲು 2000 ಕೋಟಿ ರೂ. ವೆಚ್ಚದಲ್ಲಿ ಪಂಪ್ಡ್ ಸ್ಟೋರೇಜ್‌ನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹರಿಯುವ ನದಿಗೆ ಯಾವುದೇ ಅಡತಡೆ ಮಾಡದಂತೆ ಈಗಿರುವ ನೀರನ್ನು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಂದಾಜು 2000 ಮೆ.ವ್ಯಾ. ವಿದ್ಯುತನ್ನು ಉತ್ಪಾದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್‌ನ್ನು ನಿರ್ಮಿಸುವಲ್ಲಿ ಪರಿಸರವಾದಿಗಳು ಸೇರಿದಂತೆ ಅನೇಕ ಜನರ ವಿರೋಧವಿರುವುದನ್ನು ತಿಳಿಯಲಾಗಿದೆ. ಈ ವಿಷಯದ ಕುರಿತಂತೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಅಂತೆಯೇ ಸ್ಥಳೀಯರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರಿಗೆ ಪರಿಸರ ನಾಶವಾಗದಿರುವ ಹಾಗೂ ಯಾರಿಗೂ ತೊಂದರೆ ಆಗದಿರುವ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೆ ಈ ಯೋಜನೆಗೆ ಬಳಸಿಕೊಳ್ಳಲಾಗುತ್ತಿರುವ 120 ಎಕರೆ ಭೂಪ್ರದೇಶದಲ್ಲಿನ ಅರಣ್ಯದಲ್ಲಿ ಹಾದು ಹೋಗಲಿರುವ ಪೈಪ್‌ಲೈನ್ ಮೇಲ್ಭಾಗದಲ್ಲಿ ನೈಸರ್ಗಿಕವಾಗಿ ಗಿಡಗಳನ್ನು ಬೆಳೆಸಲಾಗುವುದು ಎಂದರು.

ಪ್ರಸ್ತುತ ಉತ್ಪಾದನೆಯಾಗುತ್ತಿರುವ ವಿದ್ಯುತ್ 1000 ಮೆ.ವ್ಯಾ. ಈ ಯೋಜನೆಯ ಅನುಷ್ಠಾನದಿಂದ ಸುಮಾರು 3000 ಮೆ.ವ್ಯಾ. ವಿದ್ಯುತ್ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದರು.

ಇದರೊಂದಿಗೆ ಅತ್ಯಂತ ಕಡಿಮೆ ವೆಚ್ಚದ ಸೋಲಾರ್ ವಿದ್ಯುತ್‌ನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ ಜನರಿಗೆ ಸಕಾಲದಲ್ಲಿ ವಿದ್ಯುತ್ ಸರಬರಾಜು ಮಾಡುವುದು ಈ ಯೋಜನೆಯ ಉದ್ದೇಶ. ಈ ಸಂದರ್ಭದಲ್ಲಿ ಕಡಿತಲೆಯಾಗುವ ಮರಗಳಿಗೆ ಪರ್ಯಾಯವಾಗಿ ಮರಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ. ಇದರಿಂದಾಗಿ ಪರಿಸರದ ಮೇಲೆ ಯಾವುದೇ ಹಾನಿಯಾಗಲಾರದು. ಅಲ್ಲದೆ ಯಾವುದೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದಿಲ್ಲ ಎಂದು ತಿಳಿಸಿದರು.

Previous articleದಕ್ಷಿಣ ಕನ್ನಡದ 38 ಕಡೆ HWC ಕೇಂದ್ರ ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು
Next articleಸೂರ್ಯವಂಶಿ ವೈಭವದ ಆಟ: ಭಾರತದ ನೂತನ ಕ್ರಿಕೆಟ್ ಸೆನ್ಸೇಷನ್

LEAVE A REPLY

Please enter your comment!
Please enter your name here