ಅಜ್ಜಿ ಕೊಂದ ಆರೋಪಿ ಕಾಲಿಗೆ ಪೊಲೀಸರ ಗುಂಡು

ಶಿವಮೊಗ್ಗ: ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿ ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ವೇಳೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೊಲೆ ಆರೋಪಿ ಕಿಶೋರ್ (26) ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ದಾಳಿಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಗಣೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಂಜಾ ವ್ಯಸನಿಯ ಕುರಿತು ದೂರು ನೀಡಲು … Continue reading ಅಜ್ಜಿ ಕೊಂದ ಆರೋಪಿ ಕಾಲಿಗೆ ಪೊಲೀಸರ ಗುಂಡು