ಉಮೇಶ್​ ಕತ್ತಿ ನಿಧನದಿಂದ ಪಕ್ಷ ಸಂಘಟನೆಗೆ ದೊಡ್ಡ ಹೊಡೆತ ಬಿದ್ದಿದೆ-ಯಡಿಯೂರಪ್ಪ

0
20

ಶಿವಮೊಗ್ಗ: ಅರಣ್ಯ ಸಚಿವ ಉಮೇಶ್​ ಕತ್ತಿ ಅವರ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಉಮೇಶ್ ಕತ್ತಿ ಅವರು ಸರಳ ಸಜ್ಜನಿಕೆ ವ್ಯಕ್ತಿ. ಉಮೇಶ ಕತ್ತಿ 8 ಬಾರಿ ಶಾಸಕರಾಗಿದ್ದರು. ನಾಲ್ಕು ಬಾರಿ ಸಚಿವರಾಗಿದ್ದರು. ನನ್ನ ಸಂಪುಟದಲ್ಲಿ ಒಳ್ಳೆಯ ಕೆಲಸ ಮಾಡಿದ್ದರು. ಅರಣ್ಯ ಮತ್ತು ಆಹಾರ ಇಲಾಖೆಯನ್ನು ಉತ್ತಮವಾಗಿ ನಿರ್ವಹಣೆ ಮಾಡುತ್ತಿದ್ದರು ಇಂತಹ ವ್ಯಕ್ತಿ ಕಳೆದುಕೊಂಡು ತುಂಬಾ ದುಃಖ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅವರ ಪ್ರಭಾವ ಎಷ್ಟಿದೆ ಎಂದು ಶಬ್ದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅಂತಹ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಕತ್ತಿ ನಿಧನದಿಂದ ಪಕ್ಷದ ಸಂಘಟನೆಗೆ ದೊಡ್ಡ ಹೊಡೆತ ಬಿದ್ದಿದೆ. ಅದನ್ನು ಸರಿಪಡಿಸಲು ಎಲ್ಲ ಪ್ರಯತ್ನ ಮಾಡುತ್ತೇವೆ. ಅಂತಿಮ ದರ್ಶನಕ್ಕೆ ನಾನು ಬೆಳಗಾವಿಗೆ ತೆರಳುತ್ತಿರುವೆ. ಉಮೇಶ್​ ಕತ್ತಿ ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ನೀಡಲಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದಿದ್ದಾರೆ.

Previous articleಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಎನ್ನುತ್ತಿದ್ದರು-ಕೆ.ಎಸ್​​ ಈಶ್ವರಪ್ಪ
Next articleಉಮೇಶ್​ ಕತ್ತಿ ನೆನೆದು ಕಣ್ಣೀರಿಟ್ಟ ಸಿಎಂ