Home ನಮ್ಮ ಜಿಲ್ಲೆ ಉಡುಪಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ನಿರಾಳ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ನಿರಾಳ

0

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್​ ಆತ್ಮಹತ್ಯೆ ಪ್ರಕರಣದ ಬಿ-ರಿಪೋರ್ಟನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಕೇಳಿದ್ದಾಗಿ ಗಂಭೀರ ಆರೋಪ ಕೇಳಿ ಬಂದಿತ್ತು. ಆದರೆ ಆರೋಪ ಸಾಬೀತಾಗಿಲ್ಲವೆಂದು ಪೊಲೀಸರು ವರದಿ ಸಲ್ಲಿಸಿದ್ದರು. ಈ ವರದಿಯನ್ನು ಪ್ರಶ್ನಿಸಿ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ವಾದ-ಪ್ರತಿವಾದ ಆಲಿಸಿ ಬಿ-ರಿಪೋರ್ಟನ್ನು ಅಂಗೀಕರಿಸಿದೆ.

Exit mobile version