SK Home Ad
Home ನಮ್ಮ ಜಿಲ್ಲೆ ಉಡುಪಿ ಅಪಘಾತ: ಆರ್‌ಎಸ್‌ಎಸ್‌ ಹಿರಿಯ ಮುಖಂಡ ಸಾವು

ಅಪಘಾತ: ಆರ್‌ಎಸ್‌ಎಸ್‌ ಹಿರಿಯ ಮುಖಂಡ ಸಾವು

0
72

ಉಡುಪಿ: ದೇವಸ್ಥಾನಕ್ಕೆ ಸೈಕಲ್‌ನಲ್ಲಿ ತೆರಳುತ್ತಿದ್ದ ಆರ್‌ಎಸ್‌ಎಸ್‌ನ ಹಿರಿಯ ಮುಖಂಡರೊಬ್ಬರು ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಈ ದುರ್ಘಟನೆ ಸಂಭವಿಸಿದೆ.

ಕೋಟ ಮಣೂರು ನಿವಾಸಿ ಗುರುದಾಸ್ ಶೆಣೈ (65) ಮೃತಪಟ್ಟವರು. ಅವರು ಅಮೃತೇಶ್ವರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಕಾರು ಅವರ ಸೈಕಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ತೀವ್ರತೆಗೆ ಕಾರು ಪಲ್ಟಿಯಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.