SK Home Ad
Home ನಮ್ಮ ಜಿಲ್ಲೆ ಉಡುಪಿ 13 ವರ್ಷ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ವಶಕ್ಕೆ

13 ವರ್ಷ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ವಶಕ್ಕೆ

0
263

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣದ ಆರೋಪಿ, ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಜಿಲ್ಲೆಯ ಬಿಡಗನಹಳ್ಳಿಯ ಮಧು ಅಲಿಯಾಸ್ ಉಮೇಶ್ ಎಂಬಾತನನ್ನು ಗುರುವಾರ ಚೆನ್ನರಾಯಪಟ್ಟಣದಲ್ಲಿ ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜೂ. 29ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಆರೋಪಿ ವಿರುದ್ಧ ಮಲ್ಪೆ ಮತ್ತು ಕಾಪು ಪೊಲೀಸ್ ಠಾಣೆಯಲ್ಲಿ ದೇವಸ್ಥಾನ ಕಳವು, ಬೆಂಗಳೂರು ನಗರದಲ್ಲಿ ಎರಡು ಹಲ್ಲೆ ಪ್ರಕರಣ ದಾಖಲಾಗಿದೆ.