SK Home Ad
Home ನಮ್ಮ ಜಿಲ್ಲೆ ಉಡುಪಿ ಬಸ್-ಲಾರಿ ಡಿಕ್ಕಿ: ಇಬ್ಬರು ಸಾವು, ಹಲವರಿಗೆ ಗಾಯ

ಬಸ್-ಲಾರಿ ಡಿಕ್ಕಿ: ಇಬ್ಬರು ಸಾವು, ಹಲವರಿಗೆ ಗಾಯ

0
440

ಉಡುಪಿ: ಬೈಂದೂರು ಸಮೀಪದ ಮರವಂತೆ ಸಮುದ್ರ ಕಿನಾರೆ ಎದುರಿನ‌ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಮಧ್ಯಾಹ್ನ ಬಸ್‌ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ದುರಂತಕ್ಕೆ ಕಾರಣವಾದ ಬಸ್ಸಿನಲ್ಲಿ ಶಿವಮೊಗ್ಗ ಶಂಕರ ಘಟ್ಟದ ಜಗದ್ಗುರು ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ‌ 47 ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್, ಡಿವೈಎಸ್ಪಿ ಎಚ್.ಡಿ‌. ಕುಲಕರ್ಣಿ, ಪಿಎಸ್ಐ ಪವನ್‌ ನಾಯ್ಕ್ ಭೇಟಿ‌ ನೀಡಿದ್ದಾರೆ.