ಹಾಡಹಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ

ಉಡುಪಿ: ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ (55) ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಉಡುಪಿಯ ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜಾ ಅವರ ಕಚೇರಿ ಸಮೀಪ ಮಧ್ಯಾಹ್ನ ಈ ಶೂಟೌಟ್ ನಡೆದಿದ್ದು, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಒಂದು ಗುಂಡು ಡೇವಿಡ್ ಅವರ ಹಣೆಗೆ ತಗುಲಿದ್ದು, ಇನ್ನೆರಡು ಗುಂಡುಗಳು ಕೈಗೆ ತಗುಲಿವೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು … Continue reading ಹಾಡಹಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ