SK Home Ad
Home ನಮ್ಮ ಜಿಲ್ಲೆ ಉಡುಪಿ 23 ಲಕ್ಷ ರೂ. ವಂಚನೆ: ದಂಪತಿ ಬಂಧನ

23 ಲಕ್ಷ ರೂ. ವಂಚನೆ: ದಂಪತಿ ಬಂಧನ

0
121

ಉಡುಪಿ: ಪೆರ್ಡೂರು ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಹಣವನ್ನು ದುರ್ಬಳಕೆ ಮಾಡಿ ಸುಮಾರು 23 ಲಕ್ಷ ರೂ. ವಂಚಿಸಿದ ಆರೋಪದಡಿ ಬರಹಗಾರ್ತಿ ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್‌ನನ್ನು ಹಿರಿಯಡಕ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ ಸುಗಂಧಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ 2023ರಿಂದ 2025ರ ವರೆಗೆ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ.

ಜೊತೆಗೆ ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷ ಹಾಗೂ ಕಾರ್ಯದರ್ಶಿಯ ನಕಲಿ ಸಹಿ ಬಳಸಿ ಬ್ಯಾಂಕಿನಿಂದ ಹಣ ಹಿಂಪಡೆದಿರುವುದು, ಲೆಕ್ಕಪರಿಶೋಧನೆ ವೇಳೆ ಅಕ್ರಮ ಬಯಲಾಗದಂತೆ ಪ್ರತ್ಯೇಕ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಿಸಿರುವುದು ಹಾಗೂ ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿ ಸುಮಾರು 23 ಲಕ್ಷ ಹಣ ದುರುಪಯೋಗಪಡಿಸಿಕೊಂಡಿರುವುದು ತನಿಖೆಯಿಂದ ಬಹಿರಂಗವಾಗಿದೆ.

ಈ ಕುರಿತಂತೆ ಇತ್ತೀಚೆಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.