Home ನಮ್ಮ ಜಿಲ್ಲೆ ಉಡುಪಿ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

0

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅ.13ರ ರಾತ್ರಿ ಬಾರಕೂರು ಸಮೀಪ ರೈಲ್ವೇ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಸುದೀಪ್ ಹೆಬ್ರಿಯಲ್ಲಿ ವೈನ್‌ ಶಾಪ್ ನಡೆಸುತ್ತಿದ್ದ ಅವರು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಒಬ್ಬ ಸಹೋದರ ಮತ್ತು ಒಬ್ಬ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶ್ರೀ ಭಂಡಾರಿಯವರ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಸಮಗ್ರ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಸುದೀಪ್​ ಈ ರೀತಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಹೆಬ್ರಿ ತಾಲೂಕು ನಿವಾಸಿಯಾಗಿರುವ ಸುದೀಪ್, ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version